Sunday, August 1, 2021
Homeಜಿಲ್ಲೆಬೆಂಗಳೂರುಷರತ್ತುಗಳೊಂದಿಗೆ ಸಾರಿಗೆ ಸಿಬ್ಬಂದಿಗೆ ವೇತನ ಬಿಡುಗಡೆ

ಇದೀಗ ಬಂದ ಸುದ್ದಿ

ಷರತ್ತುಗಳೊಂದಿಗೆ ಸಾರಿಗೆ ಸಿಬ್ಬಂದಿಗೆ ವೇತನ ಬಿಡುಗಡೆ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ-ಲಾಕ್​ಡೌನ್​ನಿಂದ ನಾಲ್ಕು ಸಾರಿಗೆ ಸಂಸ್ಥೆಗಳು ನಷ್ಟದ ಸುಳಿಯಲ್ಲಿವೆ. ತನ್ನದೇ ಸಿಬ್ಬಂದಿಗೆ ವೇತನವನ್ನೂ ಕೊಡಲು ಆಗದ ಪರಿಸ್ಥಿತಿಗೆ ತಲುಪಿವೆ. ಬಳಿಕ ಸಹಾಯಕ್ಕಾಗಿ ರಾಜ್ಯ ಸರ್ಕಾರ ಮಧ್ಯಪ್ರವೇಶಿಸಿ ವಿಶೇಷ ಅನುದಾನ ಬಿಡುಗಡೆ ಮಾಡುತ್ತಾ ಬಂದಿದೆ. ಇದೀಗ, ನಾಲ್ಕು ನಿಗಮಗಳ ಸಾರಿಗೆ ನೌಕರರಿಗೆ ಜೂನ್ ತಿಂಗಳ ವೇತನಕ್ಕಾಗಿ ಸರ್ಕಾರದಿಂದ ಅನುದಾನ ಬಿಡುಗಡೆಯಾಗಿದೆ. 16,250 ಲಕ್ಷ ರೂಪಾಯಿ ಅನುದಾನ ಬಿಡುಗಡೆ ಮಾಡಿ ಕೆಲ ಷರತ್ತುಗಳೊಂದಿಗೆ ಆದೇಶ ಹೊರಡಿಸಿದೆ.

ಸಾರಿಗೆ ನಿಗಮಗಳ ಕಷ್ಟಕ್ಕೆ ಧಾವಿಸಿರುವ ಸರ್ಕಾರ, ಏಪ್ರಿಲ್, ಮೇ ತಿಂಗಳು ಹಾಗೂ ಜೂನ್ ಅರ್ಧ ತಿಂಗಳ ವೇತನಕ್ಕಾಗಿ ಹಣ ಬಿಡುಗಡೆ ಮಾಡಿದೆ‌. ಕೆಎಸ್ಆರ್​ಟಿಸಿಗೆ 10,176 ಲಕ್ಷ, ಬಿಎಂಟಿಸಿಗೆ 9,862 ಲಕ್ಷ, ವಾಯವ್ಯ ಸಾರಿಗೆ ಸಂಸ್ಥೆಗೆ 6,642 ಲಕ್ಷ, ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆಗೆ 5,820 ಲಕ್ಷ ಬಿಡುಗಡೆ ಮಾಡಿದೆ. ಒಟ್ಟಾರೆ ನಾಲ್ಕೂ ನಿಗಮಕ್ಕೆ 32,500 ಲಕ್ಷ ( 325 ಕೋಟಿ) ಏಪ್ರಿಲ್, ಮೇ, ಜೂನ್​ ಅರ್ಧ ತಿಂಗಳ ವೇತನ ಬಿಡುಗಡೆ ಮಾಡಿದೆ.‌

ಹಾಗೆಯೇ, ಜೂನ್ ತಿಂಗಳ ಅರ್ಧದಷ್ಟು ಸಂಬಳಕ್ಕಾಗಿ 1,62,50,00 ಲಕ್ಷ ಬಿಡುಗಡೆ ಮಾಡಿದೆ. ಜೂನ್ ತಿಂಗಳ ವೇತನಕ್ಕಾಗಿ 325 ಕೋಟಿ ಹಣಕ್ಕೆ ಬೇಡಿಕೆಯನ್ನು ನಿಗಮಗಳು ಇಟ್ಟಿದ್ದವು. ಸದ್ಯ ಕೋವಿಡ್ ಹಿನ್ನೆಲೆ ಆರ್ಥಿಕ ಸಂಕಷ್ಟ ನೆಪವೊಡ್ಡಿ 162 ಕೋಟಿ 50 ಲಕ್ಷ ಮಾತ್ರ ಬಿಡುಗಡೆ ಮಾಡಿದೆ.‌ ಈ ಹಣದಲ್ಲಿ ಸಿಬ್ಬಂದಿಯ ವೇತನವನ್ನು ಮಾತ್ರ ನೀಡಬೇಕು, ಇತರೆ ಆರ್ಥಿಕ ಸೌಲಭ್ಯ ಹಾಗೂ ಭತ್ಯೆಗಳನ್ನ ನೀಡಕೂಡದು ಎಂದು ಆದೇಶಿಸಿದೆ.‌

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img