Sunday, August 1, 2021
HomeಬೆಂಗಳೂರುSSLC ಮಕ್ಕಳಿಗೆ ಸಿಹಿ ಸುದ್ದಿ

ಇದೀಗ ಬಂದ ಸುದ್ದಿ

SSLC ಮಕ್ಕಳಿಗೆ ಸಿಹಿ ಸುದ್ದಿ

ಬೆಂಗಳೂರು: ಈ ಬಾರಿಯ ಎಸ್ಸೆಸ್ಸೆಲ್ಲಿ ಪರೀಕ್ಷೆಯು ಸುರಕ್ಷಿತ ವಾತಾವರಣದಲ್ಲಿ ನಡೆಸುವ ಸಲುವಾಗಿ ಹಲವಾರು ಸಂಘ ಸಂಸ್ಥೆಸಗಳು ಮಾಸ್ಕ್, ಸ್ಯಾನಿಟೈಸರ್ ಗಳನ್ನು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಗೆ ನೀಡಿದ್ದಾರೆ. ಈ ಸಂಘ ಸಂಸ್ಥೆಗಳವರು ತಾವು ಪರೀಕ್ಷಾ‌ರ್ಥಿಗಳಿಗೆ ಒದಗಿಸುವ ಪರಿಕರಗಳನ್ನು ಶುಕ್ರವಾರ ಡಿ.ಎಸ್‍.ಇ.ಆರ್.ಟಿ.ಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಕಳೆದ ವರ್ಷದಂತೆಯೇ ಅನೇಕ ಸಂಘಸಂಸ್ಥೆಗಳವರು ನಮ್ಮ ಮಕ್ಕಳ ಹಿತಕ್ಕೋಸ್ಕರ ಮತ್ತು ಪರೀಕ್ಷೆಯ ಸಂದರ್ಭದಲ್ಲಿ ಮಕ್ಕಳ ಸುರಕ್ಷತೆಗಾಗಿ ಈ ವರ್ಷವೂ ಮಾಸ್ಕ್, ಸ್ಯಾನಿಟೈಸರ್ ಗಳನ್ನು ಒದಗಿಸುತ್ತಿರುವುದು ನಮ್ಮಲ್ಲಿ ಆತ್ಮವಿಶ್ವಾಸ ಮೂಡಿಸಿದ್ದು, ಪರೀಕ್ಷೆಗಳು ಮತ್ತು ಮಕ್ಕಳ ಹಿತಾಸಕ್ತಿ ಕುರಿತು ಸಮಾಜದ ಬೆಂಬಲ ಈ ಮೂಲಕ ವ್ಯಕ್ತವಾಗಿರುವುದು ನಮ್ಮಲ್ಲಿ ಹರ್ಷ ಮೂಡಿಸಿದೆ ಎಂದರು. ಹಾಗೆಯೇ ಸಹಾಯ ಮತ್ತು ಸಹಕಾರದ ಹಸ್ತ ಚಾಚಿರುವ ಎಲ್ಲರಿಗೂ ಸಚಿವರು ಕೃತಜ್ಞತೆ ಸಲ್ಲಿಸಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಪರೀಕ್ಷಾರ್ಥಿಗಳಿಗೆ ಬಟ್ಟೆಯಿಂದ ಮಾಡಿದ ಮಾಸ್ಕ್ ಮತ್ತು ಸಿಬ್ಬಂದಿಗೆ ಎನ್-95 ಮಾಸ್ಕ್‍ಗಳನ್ನು ನೀಡಿದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img