Friday, July 30, 2021
Homeಜಿಲ್ಲೆಬೆಂಗಳೂರುಜುಲೈ 11ರಂದು ನೂತನ ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೋಟ್ ಪದಗ್ರಹಣ

ಇದೀಗ ಬಂದ ಸುದ್ದಿ

ಜುಲೈ 11ರಂದು ನೂತನ ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೋಟ್ ಪದಗ್ರಹಣ

ಬೆಂಗಳೂರು : ರಾಜ್ಯದ ನೂತನ ರಾಜ್ಯಪಾಲರಾಗಿ ನೇಮಕಗೊಂಡಿರುವ ಕೇಂದ್ರದ ಮಾಜಿ ಸಚಿವ ಥಾವರ್ ಚಂದ್ ಗೆಹ್ಲೋಟ್ ಜುಲೈ 11ರಂದು ರಾಜಭವನದಲ್ಲಿ ನಡೆಯುವ ಸರಳ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಜುಲೈ 11ರ ಭಾನುವಾರ ಬೆಳಗ್ಗೆ 10.30ಕ್ಕೆ ನೂತನ ರಾಜ್ಯಪಾಲರ ಪ್ರಮಾಣವಚನ ಕಾರ್ಯಕ್ರಮಕ್ಕೆ ರಾಜಭವನದಲ್ಲಿ ಸಿದ್ಧತೆಗಳು ಆರಂಭಗೊಂಡಿವೆ. ರಾಜ್ಯದ 19ನೇ ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ನೂತನ ರಾಜ್ಯಪಾಲರಿಗೆ ಅಧಿಕಾರ ಹಾಗೂ ಗೌಪ್ಯತೆಯ ಪ್ರಮಾಣವಚನವನ್ನು ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಬೋಧಿಸಲಿದ್ದು, ರಾಜಭವನದ ಗಾಜಿನ ಮನೆಯಲ್ಲಿ ಕೊರೊನಾ ಮಾರ್ಗಸೂಚಿಯಂತೆ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img