Sunday, August 1, 2021
Homeಜಿಲ್ಲೆಬೆಂಗಳೂರುಅಚ್ಚರಿ ಮೂಡಿಸಿದ ಎಂ.ಬಿ ಪಾಟೀಲ್-ಯಡಿಯೂರಪ್ಪ ಭೇಟಿ

ಇದೀಗ ಬಂದ ಸುದ್ದಿ

ಅಚ್ಚರಿ ಮೂಡಿಸಿದ ಎಂ.ಬಿ ಪಾಟೀಲ್-ಯಡಿಯೂರಪ್ಪ ಭೇಟಿ

ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ಮಾಜಿ ಸಚಿವ ಎಂ.ಪಿ. ಪಾಟೀಲ್ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಮಾಜಿ ಸಚಿವ ಎಂ.ಬಿ. ಪಾಟೀಲ್ ಅವರು ಸಿಎಂ ಅಧಿಕೃತ ನಿವಾಸ ಕಾವೇರಿಗೆ ತೆರಳಿ ಭೇಟಿ ಮಾಡಿರುವುದು ಕುತೂಹಲ ಮೂಡಿಸಿದೆ.

ಸಿಎಂ ಭೇಟಿಯ ಬಳಿಕ ಮಾತನಾಡಿರುವ ಎಂ.ಬಿ. ಪಾಟೀಲ್, ಯಾವುದೇ ರಾಜಕೀಯ ಚರ್ಚೆಯನ್ನು ಮಾಡಿಲ್ಲ ಎಂದು ಸ್ಷಷ್ಟಪಡಿಸಿದ್ದಾರೆ. ಆದರೂ ಇಬ್ಬರು ನಾಯಕರ ಭೇಟಿ ಮಹತ್ವದ ಪಡೆದುಕೊಂಡಿದ್ದು, ಅದಕ್ಕೆ ಕಾರಣವೂ ಇದೆ.

ಸರ್ಕಾರಿ ಕೆಲಸಗಳಿದ್ದಾಗ ರಾಜಕೀಯ ನಾಯಕರು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡುವುದು ವಾಡಿಕೆ. ಆದರೆ ಎಂ.ಬಿ. ಪಾಟೀಲ್ ಹಾಗೂ ಯಡಿಯೂರಪ್ಪ ಅವರು ಕೃಷ್ಣಾದಲ್ಲಿ ಭೇಟಿ ಮಾಡಿಲ್ಲ, ಬದಲಿಗೆ ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಭೇಟಿ ಮಾಡಿದ್ದಾರೆ.

ನಾನು ಒಬ್ಬ ಶಾಸಕ, ಯಡಿಯೂರಪ್ಪ ರಾಜ್ಯದ ಮುಖ್ಯಮಂತ್ರಿಗಳು. ಹೀಗಾಗಿ ‌ನಾನು‌ ಅವರನ್ನು ಭೇಟಿಯಾಗಿದ್ದೇನೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ನನ್ನ ಕ್ಷೇತ್ರದ, ಜಿಲ್ಲೆಯ ನೀರಾವರಿ ಯೋಜನೆಗಳ ಬಗ್ಗೆ ಚರ್ಚೆ ಮಾಡಿದ್ದೇನೆ. ಆದರೆ ಈ ಸಂದರ್ಭದಲ್ಲಿ ಯಾವುದೇ ರಾಜಕೀಯ ಚರ್ಚೆ ಮಾಡಿಲ್ಲ” ಎಂದು ಸಿಎಂ ಭೇಟಿ ಮಾಡಿದ ಬಳಿಕ ಮಾಜಿ ಸಚಿವ ಎಂ.ಬಿ. ಪಾಟೀಲ್ ಮಾಧ್ಯಮಗಳಿಗೆ ಹೇಳಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img