Thursday, July 29, 2021
Homeಜಿಲ್ಲೆಬೆಂಗಳೂರುಅಧಿಕಾರದಿಂದ ಕೆಳಗಿಳಿದ ಮೇಲೆಯೂ ಸಂತೋಷವಾಗುತ್ತಿದೆ: ಸದಾನಂದ ಗೌಡ

ಇದೀಗ ಬಂದ ಸುದ್ದಿ

ಅಧಿಕಾರದಿಂದ ಕೆಳಗಿಳಿದ ಮೇಲೆಯೂ ಸಂತೋಷವಾಗುತ್ತಿದೆ: ಸದಾನಂದ ಗೌಡ

ಬೆಂಗಳೂರು; ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟ ಪುನಾರಚನೆಯಾದ ಹಿನ್ನೆಲೆಯಲ್ಲಿ ವರಿಷ್ಠರ ಸೂಚನೆಯಂತೆ ರಸಗೊಬ್ಬರ ಮತ್ತು ರಾಸಾಯನಿಕ ಕೇಂದ್ರ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಂಸದ ಡಿ ವಿ ಸದಾನಂದ ಗೌಡ ನಿನ್ನೆ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದರು.

ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಿಜೆಪಿ ಕಾರ್ಯಕರ್ತರು ಅವರನ್ನು ಅದ್ದೂರಿಯಾಗಿಯೇ ಸ್ವಾಗತಿಸಿದರು. ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರೂ ಕೂಡ ಅವರ ಮಾತಿನ ವರಸೆಯಲ್ಲಿ ಬೇಸರ, ಸಿಟ್ಟು, ಅಸಮಾಧಾನ ಕಾಣಲಿಲ್ಲ. ಒಬ್ಬ ಗೆದ್ದ ರಾಜಕೀಯ ಮುಖಂಡನಿಗೆ ಸಿಕ್ಕಿದ ಸ್ವಾಗತ ಅವರಿಗೆ ನಿನ್ನೆ ಬೆಂಗಳೂರಿಗೆ ಬಂದಿಳಿದಾಗ ಪಕ್ಷದ ಕಾರ್ಯಕರ್ತರು ಮತ್ತು ನಾಯಕರಿಂದ ಸಿಕ್ಕಿತು.

ಈ ಬಗ್ಗೆ ಮಾಧ್ಯಮ ಪ್ರತಿನಿಧಿಗಳ ಮುಂದೆ ಮಾತನಾಡಿದ ಡಿ ವಿ ಸದಾನಂದ ಗೌಡ, ಪಕ್ಷದಲ್ಲಿ ಮುಂದೆ ಕೆಲಸ ಮಾಡಬೇಕೆಂಬ ಹಿರಿಯರ ಮಾತಿಗೆ ಬೆಲೆ ನೀಡಿ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಬಂದಿದ್ದೇನೆ. ಇಂದು ಅಧಿಕಾರದಿಂದ ಕೆಳಗಿಳಿಯುವಾಗಲೂ ಕೂಡ ಕಾರ್ಯಕರ್ತರು, ಬೆಂಬಲಿಗರಿಂದ ಇಷ್ಟು ದೊಡ್ಡ ಸಂಖ್ಯೆಯಲ್ಲಿ ಸ್ವಾಗತಿಸಿ ಆಶೀರ್ವಾದ ಮಾಡಲು ಬಂದಿರುವುದು ನೋಡಿದಾಗ ನನಗೆ ಖುಷಿಯಾಗುತ್ತಿದೆ. ಅವರ ಪ್ರೀತಿ, ವಿಶ್ವಾಸ ಗಳಿಸಿಕೊಂಡು ಮುಂದೆ ಪಕ್ಷಕ್ಕಾಗಿ ಕೆಲಸ ಮಾಡುತ್ತೇನೆ ಎಂದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img