Thursday, July 29, 2021
Homeಜಿಲ್ಲೆಬೆಂಗಳೂರುರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನ ಭಾರೀ ಮಳೆ

ಇದೀಗ ಬಂದ ಸುದ್ದಿ

ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನ ಭಾರೀ ಮಳೆ

ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯ ಪಶ್ಚಿಮ ಮಧ್ಯಭಾಗದಲ್ಲಿ ಜುಲೈ 11 ರಂದು ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್‌ಇ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಜುಲೈ 10 ಮತ್ತು 13 ರಂದು ಆರೆಂಜ್ ಮತ್ತು ಜುಲೈ 11, 12 ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ.

ಇನ್ನು ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ಬೀದರ್ ರಾಯಚೂರು, ಕಲಬುರ್ಗಿ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನ ಭಾರೀ ಮಳೆ

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img