Sunday, August 1, 2021
Homeಜಿಲ್ಲೆಬೆಂಗಳೂರು"ಎರಡನೇ ಡೋಸ್‌ ಪಡೆಯದಿದ್ದರೆ ರೋಗ ನಿರೋಧಕ ಶಕ್ತಿ ವೃದ್ಧಿಯಾಗುವುದಿಲ್ಲ"

ಇದೀಗ ಬಂದ ಸುದ್ದಿ

“ಎರಡನೇ ಡೋಸ್‌ ಪಡೆಯದಿದ್ದರೆ ರೋಗ ನಿರೋಧಕ ಶಕ್ತಿ ವೃದ್ಧಿಯಾಗುವುದಿಲ್ಲ”

ಬೆಂಗಳೂರು : ಕೊರೊನಾ ಲಸಿಕೆ ಎರಡನೇ ಡೋಸ್‌ ಪಡೆಯದಿದ್ದರೆ ರೋಗ ನಿರೋಧಕ ಶಕ್ತಿ ವೃದ್ಧಿಯಾಗುವುದಿಲ್ಲ. ಆದ್ದರಿಂದ ಎಲ್ಲರೂ ಕಡ್ಡಾಯವಾಗಿ ಎರಡನೇ ಡೋಸ್‌ ಪಡೆದುಕೊಳ್ಳಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಕೆಲವರು ಎರಡನೇ ಡೋಸ್‌ ಲಸಿಕೆ ಹಾಕಿಸಿಕೊಳ್ಳಲು ಹಿಂದೇಟು ಹಾಕುತ್ತಿರುವ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ. ಈ ಮಧ್ಯೆ, ಗರ್ಭಿಣಿಯರು ಹಾಗೂ ಹಾಲುಣಿಸುವ ತಾಯಂದಿರು ಲಸಿಕೆ ಪಡೆದುಕೊಳ್ಳುವಂತೆ ಕೆಂದ್ರ ಆರೋಗ್ಯ ಸಚಿವಾಲಯ ಮಾರ್ಗಸೂಚಿ ಹೊರಡಿಸಿದೆ.

ಕೊವ್ಯಾಕ್ಸಿನ್‌ ಲಸಿಕೆ ಪಡೆದವರು 4 ವಾರಗಳ ಬಳಿಕ ಹಾಗೂ ಕೊವಿಶೀಲ್ಡ್ ಲಸಿಕೆ ಪಡೆದವರು 12 ವಾರಗಳ ಬಳಿಕ ಎರಡನೇ ಡೋಸ್‌ ಹಾಕಿಸಿಕೊಳ್ಳಬೇಕು. ಮೊದಲ ಡೋಸ್‌ ಪಡೆದ ಬಳಿಕ ಕೊರೊನಾ ಸೋಂಕು ತಗಲಿದ್ದರೆ ಗುಣಮುಖರಾದ ಮೂರು ತಿಂಗಳ ಬಳಿಕ ಎರಡನೇ ಡೋಸ್‌ ಪಡೆದುಕೊಳ್ಳಬೇಕು ಎಂದು ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕಿ ಮತ್ತು ಕೊರೊನಾ ಲಸಿಕೆ ವಿಭಾಗದ ರಾಜ್ಯ ಮುಖ್ಯಸ್ಥೆ ಡಾ| ಅರುಂಧತಿ ಚಂದ್ರಶೇಖರ್‌ ತಿಳಿಸಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img