Thursday, July 29, 2021
Homeಸುದ್ದಿ ಜಾಲ3ನೇ ಅಲೆಯಲ್ಲಿ ಮಕ್ಕಳಿಗೆ ಅಪಾಯವಿಲ್ಲ : ಸಚಿವ ಡಾ.ಸುಧಾಕರ್

ಇದೀಗ ಬಂದ ಸುದ್ದಿ

3ನೇ ಅಲೆಯಲ್ಲಿ ಮಕ್ಕಳಿಗೆ ಅಪಾಯವಿಲ್ಲ : ಸಚಿವ ಡಾ.ಸುಧಾಕರ್

ದಾವಣಗೆರೆ : ಮೂರನೇ ಅಲೆಯಲ್ಲಿ ಮಕ್ಕಳಿಗೆ ಯಾವುದೇ ಅಪಾಯವಿಲ್ಲ ಎಂದು ತಜ್ಞರ ವರದಿಗಳಿವೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, ಮಕ್ಕಳಿಗೆ ಯಾವುದೇ ಅಪಾಯವಿಲ್ಲ ಎಂದು ತಜ್ಞರ ವರದಿಯಲ್ಲಿ ತಿಳಿಸಲಾಗಿದೆ.

ಹಾಗಂತಾ, ಯಾವ ಪೋಷಕರು ಮೈಮರೆಯುವಂತಿಲ್ಲ. ಅನ್​ಲಾಕ್ ಆಗಿದೆ ಎಂದು ಯಾರೂ ಮೈಮರೆಯುವಂತಿಲ್ಲ. ಎರಡನೇ ಡೋಸ್ ಲಸಿಕೆ ಪಡೆಯುವವರೆಗೂ ಎಲ್ಲರೂ ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಹೇಳಿದ್ದಾರೆ.

ಈಗಾಗಲೇ ಕೇರಳ ಹಾಗೂ ಮಹಾರಾಷ್ಟ್ರದಲ್ಲಿ ಕೇಸ್​ಗಳ ಸಂಖ್ಯೆ ಹೆಚ್ಚಿವೆ. ಕೇರಳದಲ್ಲಿ ಪ್ರತಿದಿನ 15 ಸಾವಿರಕ್ಕೂ ಹೆಚ್ಚು ಕೊರೊನಾ ಪ್ರಕರಣ ವರದಿಯಾಗುತ್ತಿವೆ. ಆ ಹಿನ್ನೆಲೆ ಕರ್ನಾಟಕದ ಗಡಿಭಾಗದಲ್ಲಿ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದೇವೆ. ಕರ್ನಾಟಕದಲ್ಲಿ ಕೇಸ್​ಗಳ ಸಂಖ್ಯೆ ಇಳಿಮುಖವಾಗುತ್ತಿವೆ. ಪ್ರತಿದಿನ 1.50 ಲಕ್ಷದಷ್ಟು ಟೆಸ್ಟಿಂಗ್ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img