Friday, July 30, 2021
Homeದೆಹಲಿಯೋಗಿ ಸರ್ಕಾರದ ವಿರುದ್ಧ ರಾಹುಲ್​ ವಾಗ್ದಾಳಿ

ಇದೀಗ ಬಂದ ಸುದ್ದಿ

ಯೋಗಿ ಸರ್ಕಾರದ ವಿರುದ್ಧ ರಾಹುಲ್​ ವಾಗ್ದಾಳಿ

ನವದೆಹಲಿ: ಉತ್ತರ ಪ್ರದೇಶದಲ್ಲಿ ನಡೆದಿರುವ ಹಿಂಸಾಚಾರ ವಿಚಾರವಾಗಿ ಕಾಂಗ್ರೆಸ್​​ನ ರಾಹುಲ್​ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅಲ್ಲಿನ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಮಹಿಳೆಯೋರ್ವಳು ನಾಮಪತ್ರ ಸಲ್ಲಿಕೆಗೆ ತೆರಳುತ್ತಿದ್ದ ವೇಳೆ ಆಕೆಯ ಸೀರೆ ಎಳೆದು ಅನುಚಿತವಾಗಿ ವರ್ತಿಸಲಾಗಿತ್ತು. ಇದೇ ವಿಚಾರವಾಗಿ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ ಹಿಂಸಾಚಾರವನ್ನ ‘ಮಾಸ್ಟರ್​ಸ್ಟ್ರೋಕ್’​ ಎಂದು ನಾಮಕರಣ ಮಾಡಿದೆ ಎಂದು ರಾಹುಲ್​ ಗಾಂಧಿ ಹೇಳಿದ್ದು, ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಟ್ವಿಟ್ ಮಾಡಿದ್ದಾರೆ.

ಉತ್ತರ ಪ್ರದೇಶ ಕಾಂಗ್ರೆಸ್​ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಮಹಿಳೆಯರು ನಾಮಪತ್ರ ಸಲ್ಲಿಕೆಯನ್ನ ತಡೆಯಲು ಬಿಜೆಪಿ ಎಲ್ಲ ರೀತಿಯಿಂದಲೂ ಮೀತಿ ಮೀರುತ್ತಿದೆ ಎಂದಿದ್ದಾರೆ. ಜತೆಗೆ ಕಳೆದ ಐದು ವರ್ಷಗಳ ಹಿಂದೆ ಮಹಿಳೆಯೋರ್ವಳು ಅತ್ಯಾಚಾರಕ್ಕೊಳಗಾದ ಸಂದರ್ಭದಲ್ಲಿ ಬಿಜೆಪಿ ಶಾಸಕನೋರ್ವ ಸಂತ್ರಸ್ತೆಯ ಕುಟುಂಬ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಇದೀಗ ಮಹಿಳೆಯೋರ್ವರು ನಾಮಪತ್ರ ಸಲ್ಲಿಕೆ ತಡೆಯಲು ಈ ರೀತಿಯಾಗಿ ನಡೆದುಕೊಂಡಿದೆ ಎಂದಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img