Sunday, August 1, 2021
Homeಜಿಲ್ಲೆಬೆಂಗಳೂರುಶಿವಣ್ಣನ ಚಿತ್ರಕ್ಕೆ ರಿಷಬ್ ಶೆಟ್ಟಿ ಆಕ್ಷನ್​ ಕಟ್

ಇದೀಗ ಬಂದ ಸುದ್ದಿ

ಶಿವಣ್ಣನ ಚಿತ್ರಕ್ಕೆ ರಿಷಬ್ ಶೆಟ್ಟಿ ಆಕ್ಷನ್​ ಕಟ್

ಬೆಂಗಳೂರು : ಅಭಿನಯದಲ್ಲಿ ಬ್ಯುಝಿಯಾಗಿರುವ ರಿಷಬ್ ಶೆಟ್ಟಿ ಮತ್ತೆ ಸಿನಿಮಾ ನಿರ್ದೇಶನಕ್ಕೆ ವಾಪಾಸ್ ಆಗಲಿದ್ದಾರೆ. ಅವರ ಮುಂದಿನ ಸಿನಿಮಾ ಶಿವಣ್ಣನ ಜೊತೆ ಎನ್ನುವ ಸುದ್ದಿ ಹೊರ ಬಿದ್ದಿದೆ. ಕರುನಾಡ ಚಕ್ರವರ್ತಿ ಶಿವರಾಜ್​ಕುಮಾರ್​ ಅವರ 126ನೇ ಚಿತ್ರಕ್ಕೆ ರಿಷಬ್​ ಶೆಟ್ಟಿ ಆಯಕ್ಷನ್​ ಕಟ್​ ಹೇಳಲಿದ್ದಾರಂತೆ.

ಹೌದು, ‘ರಿಕ್ಕಿ’, ‘ಕಿರಿಕ್​ ಪಾರ್ಟಿ’, ‘ಸ.ಹಿ.ಪ್ರಾ. ಶಾಲೆ ಕಾಸರಗೋಡು’ ಅಂಥಹ ಸೂಪರ್ ಹಿಟ್ ಚಿತ್ರಗಳನ್ನು ನೀಡಿರುವ ರಿಷಬ್ ಶೆಟ್ಟಿ ಸದ್ಯ, ರುದ್ರಪ್ರಯಾಗ್​ ಚಿತ್ರದ ಕೆಲಸಗಳಲ್ಲಿ ಅವರು ಬ್ಯುಸಿ ಇದ್ದಾರೆ. ಈ ಮಧ್ಯೆ ಶಿವಣ್ಣ ಅವರ 126ನೇ ಚಿತ್ರಕ್ಕೆ ಇವರೇ ನಿರ್ದೇಶನ ಮಾಡಲಿದ್ದಾರೆ ಎನ್ನುವ ಟಾಕ್ ಕೇಳಿ ಬಂದಿದೆ. ಜುಲೈ 12 ಶಿವಣ್ಣನ ಬರ್ತ್ ಡೇ. ಅಂದು ಈ ಸಿನಿಮಾ ಅನೌನ್ಸ್ ಆಗಲಿದೆಯಂತೆ.

ಅಂದಹಾಗೆ ರಿಷಬ್​-ಶಿವರಾಜ್​ಕುಮಾರ್​ ಕಾಂಬಿನೇಷನ್​ನಲ್ಲಿ ಮೂಡಿ ಬರಲಿರುವ ಚಿತ್ರಕ್ಕೆ ಜಯಣ್ಣ ಫಿಲ್ಮ್ಸ್​ ಬಂಡವಾಳ ಹೂಡುತ್ತಿದೆ ಎನ್ನಲಾಗಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img