Thursday, July 29, 2021
Homeಜಿಲ್ಲೆಬೆಂಗಳೂರುಕೊರೋನಾ 3ನೇ ಅಲೆ ಎದುರಿಸಲು ಕೇಂದ್ರದಿಂದ ರಾಜ್ಯಕ್ಕೆ 1500 ಕೋಟಿ ಹಂಚಿಕೆ

ಇದೀಗ ಬಂದ ಸುದ್ದಿ

ಕೊರೋನಾ 3ನೇ ಅಲೆ ಎದುರಿಸಲು ಕೇಂದ್ರದಿಂದ ರಾಜ್ಯಕ್ಕೆ 1500 ಕೋಟಿ ಹಂಚಿಕೆ

ಬೆಂಗಳೂರು: ದೇಶದಲ್ಲಿ ಸಂಭವನೀಯ ಕೋವಿಡ್​​ 3ನೇ ಅಲೆಯ ನಿರ್ವಹಣೆಗೆ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ 1,500 ಕೋಟಿ ರೂ. ನೆರವು ದೊರೆತಿದೆ. ಮುಖ್ಯಮಂತ್ರಿಗಳ ನೇತೃತ್ವದಲ್ಲಿ ರಾಜ್ಯದಲ್ಲಿ 3ನೇ ಅಲೆಯ ನಿರ್ವಹಣೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ. ಸುಧಾಕರ್ ಹೇಳಿದರು.

ಜಯನಗರದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಯುನೈಟೆಡ್‌ ಆಸ್ಪತ್ರೆಯಲ್ಲಿ ಕೊರೊನಾ ಲಸಿಕಾ ವಿತರಣೆ ಕಾರ್ಯಕ್ರಮಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಿ ಅವರು ಮಾತನಾಡಿದರು. ಯುವ ವೈದ್ಯರ ತಂಡ ಕಲಬುರಗಿಯಲ್ಲಿ ಅತ್ಯುತ್ತಮ ಸೇವೆಯನ್ನು ಸಲ್ಲಿಸಿ ಬೆಂಗಳೂರಿನಲ್ಲಿಯೂ ಆಸ್ಪತ್ರೆಯನ್ನು ಪ್ರಾರಂಭಿಸಿರುವುದು ಸಂತಸದ ವಿಷಯ. ಕೊರೊನಾ ಸಾಂಕ್ರಾಮಿಕ ಹೆಚ್ಚಾಗಿದ್ದಾಗ ರಾಜ್ಯದಲ್ಲಿ ಆರೋಗ್ಯ ಸೌಲಭ್ಯಗಳ ಕೊರತೆ ಉಂಟಾಗಿತ್ತು. ಆ ಸಮಯದಲ್ಲಿ ಖಾಸಗಿ ಆಸ್ಪತ್ರೆಗಳು ನೀಡಿದ ಸಹಕಾರ ಬಹಳ ಶ್ಲಾಘನೀಯ ಎಂದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img