Friday, July 23, 2021
Homeಬೆಂಗಳೂರುಯಾರು ಸಮಸ್ಯೆ ಸೃಷ್ಟಿಸಿದ್ದಾರೋ ಅವರು ಅರ್ಥ ಮಾಡಿಕೊಂಡರೆ ಸಾಕು: ಸುಮಲತಾ

ಇದೀಗ ಬಂದ ಸುದ್ದಿ

ಯಾರು ಸಮಸ್ಯೆ ಸೃಷ್ಟಿಸಿದ್ದಾರೋ ಅವರು ಅರ್ಥ ಮಾಡಿಕೊಂಡರೆ ಸಾಕು: ಸುಮಲತಾ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್​ ​ಡಿ ಕುಮಾರಸ್ವಾಮಿ ಕದನ ವಿರಾಮ ಬಗ್ಗೆ ನನ್ನ ಗಮನ ಇಲ್ಲ. ನನ್ನ ಗಮನ ಏನಿದ್ದರೂ ಮಂಡ್ಯ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ನಿಲ್ಲಿಸುವುದು ಎಂದು ಸಂಸದೆ ಸುಮಲತಾ ತಿಳಿಸಿದ್ದಾರೆ.

ಇಂದು ರಾಜಭವನದ ಬಳಿ ಮಾತನಾಡಿದ ಅವರು, ನಾನು ಯಾರನ್ನೂ ಟಾರ್ಗೆಟ್ ಮಾಡಿಲ್ಲ. ನಾನು ದ್ವೇಷದ ರಾಜಕಾರಣ ಮಾಡುತ್ತಿಲ್ಲ. ನನ್ನ ಹೋರಾಟ ನನ್ನ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ನಿಲ್ಲಿಸುವುದು. ಅಕ್ರಮ ಗಣಿಗಾರಿಕೆ ಬಗ್ಗೆ ಎಲ್ಲರ ಗಮನಕ್ಕೆ ತಂದಿದ್ದೇನೆ. ನನ್ನ ಹೋರಾಟದತ್ತ ನನ್ನ ಗಮನ ಇರುತ್ತಷ್ಟೇ ಎಂದ್ರು.

ಸಂಸತ್​ನಲ್ಲೂ ಮಂಡ್ಯ ಅಕ್ರಮ ಗಣಿಗಾರಿಕೆ ವಿಚಾರ ಪ್ರಸ್ತಾಪ ಮಾಡ್ತೇನೆ. ಈ ಸಂಬಂಧ ಸಿಎಂ ಅವರನ್ನೂ, ಗಣಿ ಸಚಿವರನ್ನೂ ಭೇಟಿ ಮಾಡ್ತೇನೆ. ನಾನು ಸಮಸ್ಯೆ ಸೃಷ್ಟಿಸಿಲ್ಲ. ಯಾರು ಸಮಸ್ಯೆ ಸೃಷ್ಟಿಸಿದ್ದಾರೋ ಅವರು ಅರ್ಥ ಮಾಡಿ‌ಕೊಂಡರೆ ಸಾಕು. ಅವರೇ ಅದಕ್ಕೆ ತೆರೆ ಎಳೆಯಲಿ ಎಂದು ಹೇಳಿದ್ರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img