Friday, July 23, 2021
Homeಸುದ್ದಿ ಜಾಲಪ್ರಧಾನಿಗೆ ಪತ್ರ ಬರೆದ ಸರ್ಕಾರಿ ನೌಕರರ ರಾಷ್ಟ್ರೀಯ ಒಕ್ಕೂಟ

ಇದೀಗ ಬಂದ ಸುದ್ದಿ

ಪ್ರಧಾನಿಗೆ ಪತ್ರ ಬರೆದ ಸರ್ಕಾರಿ ನೌಕರರ ರಾಷ್ಟ್ರೀಯ ಒಕ್ಕೂಟ

ನವದೆಹಲಿ: ಆರ್ಡನೆನ್ಸ್ ಫ್ಯಾಕ್ಟರಿ ಬೋರ್ಡ್ (ಒಎಫ್‌ಬಿ) ನ ಉತ್ಪಾದನಾ ಘಟಕಗಳನ್ನು ಖಾಸಗೀಕರಣಗೊಳಿಸದಂತೆ ಒತ್ತಾಯಿಸಿ ಸರ್ಕಾರಿ ನೌಕರರ ರಾಷ್ಟ್ರೀಯ ಒಕ್ಕೂಟವು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದೆ. ಜೂನ್ 16 ರಂದು ನಡೆದ ಸಂಪುಟ ಸಭೆಯಲ್ಲಿ ಒಎಫ್​ಬಿ ಘಟಕಗಳನ್ನು ಖಾಸಗೀಕರಣಗೊಳಿಸಲು ಸಂಪುಟ ಸಭೆ ನಿರ್ಧರಿಸಿತ್ತು.

1775 ರಲ್ಲಿ ಬ್ರಿಟಿಷರು ಸ್ಥಾಪಿಸಿದ OFBಯ ಅಂಶಗಳ ಪ್ರಕಾರ ಉತ್ಪಾದಕ ಮತ್ತು ಲಾಭದಾಯಕ ಸ್ವತ್ತುಗಳಾಗಿ ಪುನರ್​​ರಚಿಸಲು ಕ್ಯಾಬಿನೆಟ್ ನಿರ್ಧರಿಸಿತು. ಭಾರತೀಯ ಸಶಸ್ತ್ರ ಪಡೆ, ಅರೆಸೈನಿಕ ಪಡೆ, ರಾಜ್ಯ ಪೊಲೀಸ್ ಪಡೆ ಸೇರಿದಂತೆ ಏಳು ರಕ್ಷಣಾ ಪಡೆಗಳನ್ನು ಖಾಸಗಿ ಒಡೆತನಕ್ಕೆ ನೀಡಲು ಸರ್ಕಾರ ನಿರ್ಧರಿಸಿದೆ.

ಕೇಂದ್ರ ಸರ್ಕಾರ ನಿರ್ಧಾರ ಕೈಗೊಳ್ಳುವ ಮುನ್ನ ಪಾಲುದಾರ ನೌಕರರ ಒಕ್ಕೂಟಗಳೊಂದಿಗೆ ಸಮಾಲೋಚನೆ ನಡೆಸಿಲ್ಲ ಎಂಬುದನ್ನು ಈ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಆತ್ಮನಿರ್ಭರ್​ ಭಾರತದ ಗುರಿ ಸಾಧಿಸಲು ಸಂಶೋಧನೆ ಮತ್ತು ಅಭಿವೃದ್ಧಿಯತ್ತ ಗಮನ ಹರಿಸಬೇಕಿದೆ, ಈ ನಿರ್ಧಾರ ಕೈಬಿಡಿ ಎಂದು ಒಕ್ಕೂಟ ಒತ್ತಾಯಿಸಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img