Friday, July 30, 2021
Homeದೆಹಲಿಪದ್ಮ ಪ್ರಶಸ್ತಿಗೆ ಸೂಕ್ತ ವ್ಯಕ್ತಿಗಳ ನಾಮನಿರ್ದೇಶನ ಮಾಡಿ: ಮೋದಿ

ಇದೀಗ ಬಂದ ಸುದ್ದಿ

ಪದ್ಮ ಪ್ರಶಸ್ತಿಗೆ ಸೂಕ್ತ ವ್ಯಕ್ತಿಗಳ ನಾಮನಿರ್ದೇಶನ ಮಾಡಿ: ಮೋದಿ

ನವದೆಹಲಿ: ಪದ್ಮ ಪ್ರಶಸ್ತಿಗೆ ಸೂಕ್ತ ವ್ಯಕ್ತಿಗಳನ್ನು ನಾಮ ನಿರ್ದೇಶನ ಅಥವಾ ಹೆಸರನ್ನು ಸೂಚಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಸಾರ್ವಜನಿಕರಲ್ಲಿ ಕೋರಿದ್ದಾರೆ.

ದೇಶದಲ್ಲಿ ಹಲವು ಕ್ಷೇತ್ರಗಳಲ್ಲಿ ಹಲವು ಪ್ರತಿಭಾವಂತರಿದ್ದಾರೆ. ಅಂತವರು ತಳಮಟ್ಟದಲ್ಲಿ ಅದ್ವಿತೀಯ ಸಾಧನೆಗಳನ್ನು, ಕೆಲಸಗಳನ್ನು ಮಾಡುತ್ತಿದ್ದಾರೆ. ಇಂತಹ ಪ್ರತಿಭಾವಂತರಲ್ಲಿ ಕೆಲವರು ಎಲೆಮರೆ ಕಾಯಿಯಂತಿರುತ್ತಾರೆ, ಬೆಳಕಿಗೆ ಬಂದಿರುವುದಿಲ್ಲ. ಅಂತಹ ಸ್ಪೂರ್ತಿ ತುಂಬುವ, ಬೇರೆಯವರಿಗೆ ಮಾರ್ಗದರ್ಶನವಾಗಬಲ್ಲ ಸ್ಪೂರ್ತಿದಾಯಕ ಜನರ ಬಗ್ಗೆ ನಿಮಗೆ ತಿಳಿದಿದ್ದರೆ ನೀವು ಅಂತವರನ್ನು ನಾಮನಿರ್ದೇಶನ ಮಾಡಿ ಎಂದಿದ್ದಾರೆ.

#PeoplesPadma ಎಂಬ ಹ್ಯಾಶ್ ಟ್ಯಾಗ್ ಬಳಸಿ ಪ್ರತಿಭಾವಂತರ ಹೆಸರುಗಳನ್ನು ನಾಮನಿರ್ದೇಶನ ಮಾಡಿ, ನಾಮನಿರ್ದೇಶನ ಸೆಪ್ಟೆಂಬರ್ 15ರವರೆಗೆ ತೆರೆದಿರುತ್ತದೆ. ಎಂದು ಸರ್ಕಾರದ ಪದ್ಮಪ್ರಶಸ್ತಿಯ ವೆಬ್ ಸೈಟ್ ನ್ನು ಪ್ರಧಾನಿ ಮೋದಿಯವರು ಟ್ವೀಟ್ ಮೂಲಕ ಹಂಚಿಕೊಂಡಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img