Friday, July 30, 2021
Homeಸಿನಿಮಾ'ರಿಚರ್ಡ್ ಆಂಟನಿ'ಗೆ ರಕ್ಷಿತ್ ಶೆಟ್ಟಿ ಆಕ್ಷನ್ ಕಟ್

ಇದೀಗ ಬಂದ ಸುದ್ದಿ

‘ರಿಚರ್ಡ್ ಆಂಟನಿ’ಗೆ ರಕ್ಷಿತ್ ಶೆಟ್ಟಿ ಆಕ್ಷನ್ ಕಟ್

ರಕ್ಷಿತ್ ಶೆಟ್ಟಿ ಅವರು ನಿರ್ದೇಶನ ಮಾಡಲಿರುವ ಹೊಸ ಚಿತ್ರದ ಹೆಸರು ‘ರಿಚರ್ಡ್ ಆಂಟನಿ’. ಲಾರ್ಡ್ ಆಫ್ ಸೀ ಎನ್ನುವ ಟ್ಯಾಗ್ ಲೈನ್ ಹೊಂದಿದೆ. ಈ ಚಿತ್ರವನ್ನು ಹೊಂಬಾಳೆ ಫಿಲ್ಮ್ ಬ್ಯಾನರ್ ನಡಿ ನಿರ್ಮಾಪಕ ವಿಜಯ್ ಕಿರಂಗದೂರು ನಿರ್ಮಿಸುತ್ತಿದ್ದಾರೆ.

ಇನ್ನು ಈ ಬಗ್ಗೆ ಟ್ವೀಟ್ ಮಾಡಿರುವ ರಕ್ಷಿತ್, ಮೊದಲು ನಮ್ಮ ಕೆಲಸ ಮಾತಾಡಲಿ, ಉಳಿದವೆಲ್ಲ ತದನಂತರ. ರಿಚರ್ಡ್ ಆಂಟನಿ-ಮುಂದಿನ ಅಲೆ, ನಿಮ್ಮ ಹೃದಯದ ದಡದಲ್ಲಿ ಜಾಗವಿರಿಸಿ, ಸದಾ ನಿಮ್ಮ ಪ್ರೀತಿಯ ಆಶೀರ್ವಾದವಿರಲಿ ಎಂದಿದ್ದಾರೆ.

ಇತ್ತೀಚೆಗಷ್ಟೇ ರಕ್ಷಿತ್ ಶೆಟ್ಟಿ ಜನ್ಮದಿನದಂದು ನಿರ್ಮಾಪಕ ವಿಜಯ್ ಕಿರಗಂದೂರು ಹಂಚಿಕೊಂಡ ಚಿತ್ರ ಎಲ್ಲರ ಗಮನಸೆಳೆದಿತ್ತು. ಹೊಸ ಚಿತ್ರಕ್ಕೆ ಇವರೀರ್ವರು ಕೈಜೋಡಿಸಲಿದ್ದಾರೆಯೇ ಎನ್ನುವ ನಿರೀಕ್ಷೆ ಅಭಿಮಾನಿಗಳಲ್ಲಿತ್ತು. ಅದು ಇದೀಗ ನಿಜವಾಗಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img