Friday, July 30, 2021
Homeಜಿಲ್ಲೆಬೆಂಗಳೂರುದುಡಿಯುವ ವ್ಯಕ್ತಿಯನ್ನು ಕಳೆದುಕೊಂಡ ಕುಟುಂಬಕ್ಕೆ ತಲುಪುತ್ತಿಲ್ಲ ಪರಿಹಾರ!

ಇದೀಗ ಬಂದ ಸುದ್ದಿ

ದುಡಿಯುವ ವ್ಯಕ್ತಿಯನ್ನು ಕಳೆದುಕೊಂಡ ಕುಟುಂಬಕ್ಕೆ ತಲುಪುತ್ತಿಲ್ಲ ಪರಿಹಾರ!

ಬೆಂಗಳೂರು: ಕೊರೊನಾ ಸೋಂಕಿನಿಂದ ದುಡಿಯುವ ವ್ಯಕ್ತಿಯನ್ನು ಕಳೆದುಕೊಳ್ಳುವ ಬಿಪಿಎಲ್ ಕುಟುಂಬಕ್ಕೆ ಒಂದು ಲಕ್ಷ ರೂ.ಗಳ ಪರಿಹಾರ ನೀಡುವುದಾಗಿ ಸರ್ಕಾರ ಪ್ರಕಟಿಸಿದ್ದು, ಮೃತಪಟ್ಟ ಕುಟುಂಬಗಳ ಪತ್ತೆ ಹಚ್ಚುವ ಕಾರ್ಯವೇ ಸರಿಯಾಗಿ ನಡೆದಿಲ್ಲ. ಹಾಗಾಗಿ ಮಾಹಿತಿ ನೀಡುವಂತೆ ಜನಪ್ರತಿನಿಧಿಗಳು ಜನತೆಗೆ ಕರೆ ನೀಡಬೇಕಾದ ಸನ್ನಿವೇಶ ನಿರ್ಮಾಣವಾಗಿದೆ.

ರಾಜ್ಯದಲ್ಲಿ ಕೊರೊನಾ ಸೋಂಕಿನ ಮೊದಲ ಅಲೆ ಮತ್ತು ಎರಡನೇ ಅಲೆಯಲ್ಲಿ ದುಡಿಯುವ ವ್ಯಕ್ತಿಯನ್ನು ಕಳೆದುಕೊಂಡಿರುವ ಕುಟುಂಬಕ್ಕೆ ಸರ್ಕಾರ ನೆರವು ಘೋಷಿಸಿತ್ತು. ಆದರೆ ಒಂದು ಲಕ್ಷ ರೂ.ಗಳ ಪರಿಹಾರ ಪಡೆದುಕೊಳ್ಳಲು ಆ ಕುಟುಂಬಗಳಿಗೆ ಇನ್ನೂ ಸಾಧ್ಯವಾಗುತ್ತಿಲ್ಲ. ಆರೋಗ್ಯ ಇಲಾಖೆ ಸರಿಯಾದ ಮಾಹಿತಿಯನ್ನು ಸರ್ಕಾರಕ್ಕೆ ನೀಡಿಲ್ಲ. ಅಲ್ಲದೆ ಜನರಿಗೂ ಯಾವ ರೀತಿ ಪರಿಹಾರ ಪಡೆದುಕೊಳ್ಳಬೇಕು ಎನ್ನುವ ಮಾಹಿತಿ ಸಿಕ್ಕಿಲ್ಲ. ಹೀಗಾಗಿ ಸರ್ಕಾರದ ಪರಿಹಾರ ಘೋಷಣೆ ಕೇವಲ ಕಾಗದದ ಮೇಲೆಯೇ ಉಳಿದುಕೊಂಡಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img