Friday, July 23, 2021
Homeಸುದ್ದಿ ಜಾಲರಾಜ್ಯದಲ್ಲಿ 9 ಮೆಡಿಕಲ್ ಕಾಲೇಜ್ ಆರಂಭ : ಸುಧಾಕರ್

ಇದೀಗ ಬಂದ ಸುದ್ದಿ

ರಾಜ್ಯದಲ್ಲಿ 9 ಮೆಡಿಕಲ್ ಕಾಲೇಜ್ ಆರಂಭ : ಸುಧಾಕರ್

ದಾವಣಗೆರೆ : ರಾಜ್ಯದಲ್ಲಿ ಇನ್ನೂ 9 ಮೆಡಿಕಲ್ ಕಾಲೇಜುಗಳನ್ನು ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಈ ವರ್ಷದಿಂದಲೇ ಆರಂಭವಾಗಲಿವೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ದಾವಣಗೆರೆ ಜಿಲ್ಲಾ ಪ್ರವಾಸದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಜಿಲ್ಲೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ನಿರ್ಮಾಣ ಮಾಡಬೇಕೆಂಬ ಉದ್ದೇಶವಿದೆ. ಈ ಬಗ್ಗೆ ಸ್ಥಳ ಪರಿಶೀಲನೆ ನಡೆಸಿದ್ದೇನೆ. ಪಿಪಿಪಿ ಮಾದರಿಯಲ್ಲಿ ಆಸ್ಪತ್ರೆ ನಿರ್ಮಿಸುವ ಬಗ್ಗೆ ಚರ್ಚೆಯಾಗಿದೆ. 9 ಜಿಲ್ಲೆಗಳಲ್ಲಿ ಪಿಪಿಪಿ ಮಾದರಿಯಲ್ಲಿ ಮೆಡಿಕಲ್ ಕಾಲೇಜು ನಿರ್ಮಿಸುವ ಉದ್ದೇಶವಿದೆ. ರಾಜ್ಯದಲ್ಲಿ 18 ಹಾಗೂ ಈಗ ಆರಂಭವಾಗುತ್ತಿರುವ ಹೊಸ ನಾಲ್ಕು ಮೆಡಿಕಲ್ ಕಾಲೇಜುಗಳು ಜಿಲ್ಲಾಕೇಂದ್ರಗಳಲ್ಲೇ ಇವೆ. ತಾಲೂಕು ಮಟ್ಟದಲ್ಲಿ ಕಾಲೇಜು ಇಲ್ಲ. ಈ ಬಗ್ಗೆ ಮನವಿ ಬಂದಿದ್ದು, ಪರಿಶೀಲಿಸಲಾಗುವುದು ಎಂದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img