Thursday, July 29, 2021
Homeಕೋವಿಡ್-19ಇಳಿಕೆಯತ್ತ ಸಾಗಿದ ಕೊರೊನಾ ಸೋಂಕಿತರ ಸಂಖ್ಯೆ

ಇದೀಗ ಬಂದ ಸುದ್ದಿ

ಇಳಿಕೆಯತ್ತ ಸಾಗಿದ ಕೊರೊನಾ ಸೋಂಕಿತರ ಸಂಖ್ಯೆ

ನವದೆಹಲಿ: ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 41,506 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಕಳೆದ 24 ಗಂಟೆಯಲ್ಲಿ 895 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಇದುವರೆಗೂ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 4,08,040ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 4,54,118 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 2,99,75,064 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 37,60,32,586 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಇನ್ನು ತ್ರಿಪುರಾದ ಕೊರೊನಾ ಟೆಸ್ಟ್‌ ಸ್ಯಾಂಪಲ್‌ ನಲ್ಲಿ ಶೇ.90 ರಷ್ಟು ಡೆಲ್ಟಾ ಪ್ಲಸ್‌ ರೂಪಾಂತರಿ ಕಂಡು ಬಂದಿರುವುದು ಮತ್ತೊಂದು ಆತಂಕಕ್ಕೆ ಕಾರಣವಾಗಿದೆ. ಎಂಟು ಜಿಲ್ಲೆಗಳ 151 ಸ್ಯಾಂಪಲ್‌ ಗಳನ್ನು ಪ್ರಯೋಗಾಲಯಕ್ಕೆ ಕಳಿಸಲಾಗಿದ್ದು, ಈ ಪೈಕಿ 138 ಸ್ಯಾಂಪಲ್‌ ನಲ್ಲಿ ಡೆಲ್ಟಾ ಪ್ಲಸ್‌ ದೃಢಪಟ್ಟಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img