Friday, July 30, 2021
Homeಸಿನಿಮಾನಟ ಸುನಿಲ್​ ಶೆಟ್ಟಿ ವಾಸವಿರುವ ಅಪಾರ್ಟ್​ಮೆಂಟ್​ ಸೀಲ್​ಡೌನ್​

ಇದೀಗ ಬಂದ ಸುದ್ದಿ

ನಟ ಸುನಿಲ್​ ಶೆಟ್ಟಿ ವಾಸವಿರುವ ಅಪಾರ್ಟ್​ಮೆಂಟ್​ ಸೀಲ್​ಡೌನ್​

ಮುಂಬೈ(ಮಹಾರಾಷ್ಟ್ರ): ಬಾಲಿವುಡ್​ ನಟ ಸುನಿಲ್​ ಶೆಟ್ಟಿ ವಾಸವಿರುವ ಅಪಾರ್ಟ್​ಮೆಂಟ್​ನಲ್ಲಿ ಕೊರೊನಾ ಪ್ರಕರಣ ಕಂಡುಬಂದಿದ್ದು, ಈ ಹಿನ್ನೆಲೆಯಲ್ಲಿ ಕಟ್ಟಡವನ್ನು ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಶನ್ ಸೀಲ್​ಡೌನ್​ ಮಾಡಿದೆ.

ಸುನಿಲ್ ಶೆಟ್ಟಿ ದಕ್ಷಿಣ ಮುಂಬೈನ ಅಲ್ಟಾಮೌಂಟ್ ರಸ್ತೆಯಲ್ಲಿರುವ ‘ಪೃಥ್ವಿ ಅಪಾರ್ಟ್​ಮೆಂಟ್’ನಲ್ಲಿ ವಾಸಿಸುತ್ತಿದ್ದಾರೆ. ಆ ಕಟ್ಟಡದಲ್ಲಿ 5 ಕೊರೊನಾ ಪ್ರಕರಣಗಳು ದಾಖಲಾದ ಹಿನ್ನೆಲೆಯಲ್ಲಿ ಬಿಎಂಸಿ ಸೀಲ್​ಡೌನ್​ ಮಾಡಿದೆ.

ಬಿಎಂಸಿಯ ಸಹಾಯಕ ಆಯುಕ್ತ ಪ್ರಶಾಂತ್ ಗಾಯಜ್​ವಾಡ್​ ಈ ಬಗ್ಗೆ ಮಾಹಿತಿ ನೀಡಿದ್ದಾರೆ. “ಪೃಥ್ವಿ ಅಪಾರ್ಟ್​ಮೆಂಟ್’ನ್ನು ಸೀಲ್​ಡೌನ್​ ಮಾಡಲಾಗಿದ್ದು, ಯಾರಿಗೂ ಪ್ರವೇಶ ನೀಡಲಾಗುವುದಿಲ್ಲ. ಇಲ್ಲಿ ಪೊಲೀಸ್​ ಭದ್ರತೆಯನ್ನು ನಿಯೋಜಿಸಲಾಗುತ್ತದೆ” ಎಂದು ಹೇಳಿದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img