Friday, July 30, 2021
Homeಸುದ್ದಿ ಜಾಲSSLC ಪರೀಕ್ಷೆ ಬೇಡ ಎಂದು ಹೈಕೋರ್ಟ್ ನಲ್ಲಿ ಸಲ್ಲಿಸಿದ್ದ ಅರ್ಜಿ ವಜಾ

ಇದೀಗ ಬಂದ ಸುದ್ದಿ

SSLC ಪರೀಕ್ಷೆ ಬೇಡ ಎಂದು ಹೈಕೋರ್ಟ್ ನಲ್ಲಿ ಸಲ್ಲಿಸಿದ್ದ ಅರ್ಜಿ ವಜಾ

ಬೆಂಗಳೂರು : ರಾಜ್ಯ ಸರ್ಕಾರದಿಂದ ಕೊರೋನಾ ಸೋಂಕಿನ ಮಧ್ಯೆಯೂ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿಯಿಂದ ಜುಲೈ.19 ಹಾಗೂ 22ರಂದು ಪರೀಕ್ಷೆಯನ್ನು ನಿಗದಿಪಡಿಸಲಾಗಿತ್ತು. ಇಂತಹ ಎಸ್ ಎಸ್ ಎಲ್ ಸಿ ಪರೀಕ್ಷೆ ಪ್ರಶ್ನಿಸಲಾಗಿದ್ದಂತ ಪಿಐಎಲ್ ಅರ್ಜಿಯನ್ನು ಹೈಕೋರ್ಟ್ ನ್ಯಾಯಪೀಠವು ವಜಾಗೊಳಿಸಿದೆ. ಈ ಮೂಲಕ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.

ಇಂದು ರಾಜ್ಯ ಹೈಕೋರ್ಟ್ ನಲ್ಲಿ ಸಲ್ಲಿಸಲಾಗಿದ್ದಂತ ಎಸ್ ಎಸ್ ಎಲ್ ಸಿ ಪರೀಕ್ಷೆ ರದ್ದು ಕೋರಿ ಸಲ್ಲಿಸಲಾಗಿದ್ದಂತ ಅರ್ಜಿಯ ವಿಚಾರಣೆ ನಡೆಸಲಾಯಿತು. ಈ ಸಂದರ್ಭದಲ್ಲಿ ಸರ್ಕಾರವು ರಾಜ್ಯದಲ್ಲಿ ಕೊರೋನಾ ಪಾಸಿಟಿವಿಟಿ ದರ 1.48ಕ್ಕೆ ಇಳಿಕೆ ಕಂಡಿದೆ. ಕೋವಿಡ್ 2ನೇ ಅಲೆಯು ಕಡಿಮೆಗೊಂಡಿದೆ. ಹೀಗಾಗಿ ಕೊರೋನಾ ಸೋಂಕಿನ ನಿಯಂತ್ರಣ ಮಾರ್ಗಸೂಚಿ ಕ್ರಮಗಳನ್ನು ಪಾಲಿಸಿ, ನಿಗದಿ ಪಡಿಸಿರುವಂತೆಯೇ ಪರೀಕ್ಷೆ ನಡೆಸಲಾಗುತ್ತದೆ ಎಂಬುದಾಗಿ ಮಾಹಿತಿ ನೀಡಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img