Sunday, August 1, 2021
Homeಸುದ್ದಿ ಜಾಲಸುಮಲತಾ ಪರ ಸಿದ್ದರಾಮಯ್ಯ ಬ್ಯಾಟಿಂಗ್

ಇದೀಗ ಬಂದ ಸುದ್ದಿ

ಸುಮಲತಾ ಪರ ಸಿದ್ದರಾಮಯ್ಯ ಬ್ಯಾಟಿಂಗ್

ಹುಬ್ಬಳ್ಳಿ: ಕೆಆರ್ ಎಸ್ ಡ್ಯಾಮ್ ಬಿರುಕು ಬಿಟ್ಟಿದೆ ಎಂದು ಸಂಸದೆ ಸುಮಲತಾ ಆರೋಪ ಮಾಡಿದ್ದಾರೆ. ಅವರು ಆರೋಪ ಮಾಡಿದ ನಂತರ ಸರ್ಕಾರವಾಗಲಿ, ಗಣಿ ಇಲಾಖೆಯಾದರು ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಬೇಕಾಗಿತ್ತು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಸುಮಲತಾ ಅವರು ತಮ್ಮ ಪುತ್ರನನ್ನು ಸೋಲಿಸಿದ್ದಕ್ಕೆ ಕುಮಾರಸ್ವಾಮಿಯವರು ಆರೋಪಕ್ಕೆ ಮುಂದಾಗಿರಬಹುದು. ಕೆಆರ್ ಎಸ್ ಸುತ್ತಮುತ್ತಲಿನ 20 ಕಿಲೋ ಮೀಟರ್ ಸುತ್ತಮುತ್ತ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ. ಅಲ್ಲಿ ಜೆಡಿಎಸ್ ನಾಯಕರ ಗಣಿ ಕಂಪನಿಗಳು ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿವೆ ಎಂದು ಆರೋಪ ಮಾಡಿದ್ದಾರೆ. ಅಕ್ರಮ ಗಣಿಗಾರಿಕೆಯಲ್ಲಿ ಆಡಳಿತ ಪಕ್ಷ ಭಾಗಿಯಾಗಿರಬಹುದು, ಅದಕ್ಕಾಗಿಯೇ ಸರ್ಕಾರ ಧ್ವನಿ ಎತ್ತುತ್ತಿಲ್ಲ ಎಂದರು.

ನಾನು ಬಾದಾಮಿಯಿಂದ ಶಾಸಕನಾಗಿರುವೆ. ಮುಂದೆ ಬಾದಾಮಿಯಿಂದಲೇ ಸ್ಪರ್ಧಿಸುವೆ. ನನಗೆ ಹಲವು ಕ್ಷೇತ್ರಗಳಿಂದ ಸ್ಪರ್ಧೆ ಮಾಡುವಂತೆ ಆಹ್ವಾನ ಇರೋದು ನಿಜ ಎಂದು ಸಿದ್ದರಾಮಯ್ಯ ಹೇಳಿದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img