Sunday, August 1, 2021
Homeಸುದ್ದಿ ಜಾಲನಿಖಿಲ್ ರನ್ನು ಸೋಲಿಸಿದ್ದಕ್ಕೆ ಸುಮಲತಾ ವಿರುದ್ಧ ಕುಮಾರಸ್ವಾಮಿ ರಾಜಕೀಯ : ಸಿದ್ದರಾಮಯ್ಯ

ಇದೀಗ ಬಂದ ಸುದ್ದಿ

ನಿಖಿಲ್ ರನ್ನು ಸೋಲಿಸಿದ್ದಕ್ಕೆ ಸುಮಲತಾ ವಿರುದ್ಧ ಕುಮಾರಸ್ವಾಮಿ ರಾಜಕೀಯ : ಸಿದ್ದರಾಮಯ್ಯ

ಹುಬ್ಬಳ್ಳಿ : ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಅವರು ನಿಖಿಲ್ ಕುಮಾರಸ್ವಾಮಿಯನ್ನು ಸೋಲಿಸಿದ್ದಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ರಾಜಕೀಯ ಮಾಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಅವರು ನಿಖಿಲ್ ಕುಮಾರಸ್ವಾಮಿಯನ್ನು ಸೋಲಿಸಿದ್ದಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ರಾಜಕೀಯ ಮಾಡುತ್ತಿದ್ದಾರೆ. ಸುಮಲತಾ ಅವರು ಕೆಆರ್ ಎಸ್ ಡ್ಯಾಂ ಬಿರುಕು ಬಿಟ್ಟಿದೆ ಎಂದು ಆರೋಪ ಮಾಡಿದ್ದಾರೆ. ಈ ಬಗ್ಗೆ ಸರ್ಕಾರವಾಗಲಿ, ಗಣಿ ಇಲಾಖೆಯಾದರೂ ಸ್ಥಳಕ್ಕೆ ಹೋಗಿ ಚಾಲನೆ ನಡೆಸಬೇಕಾಗಿತ್ತು. ಕೆಆರ್ ಎಸ್ ಡ್ಯಾಂನ 20 ಕಿ.ಮೀ ಸುತ್ತಮುತ್ತ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ ಎಂದು ಸುಮಲತಾ ಆರೋಪಿಸಿದ್ದಾರೆ. ಹೀಗಾಗಿ ಸರ್ಕಾರ ಅಕ್ರಮ ಗಣಿಗಾರಿಕೆ ವಿರುದ್ಧ ಧ್ವನಿ ಎತ್ತುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img