Sunday, August 1, 2021
Homeಜಿಲ್ಲೆಶಿವಮೊಗ್ಗSSLC ಪರೀಕ್ಷೆ ಯಶಸ್ವಿಯಾಗಿ ನಡೆಸಲು ಸಕಲ ಸಿದ್ದತೆ

ಇದೀಗ ಬಂದ ಸುದ್ದಿ

SSLC ಪರೀಕ್ಷೆ ಯಶಸ್ವಿಯಾಗಿ ನಡೆಸಲು ಸಕಲ ಸಿದ್ದತೆ

ಶಿವಮೊಗ್ಗ : ಕೋವಿಡ್ ಹಿನ್ನೆಲೆಯಲ್ಲಿ ಈ ವರ್ಷ ನೂತನವಾಗಿ ಬಹು ಆಯ್ಕೆ ಮಾದರಿಯಂತೆ ಜುಲೈ 19 ಮತ್ತು 22 ರಂದು ನಡೆಯುವ ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ಯಾವುದೇ ಅಡ್ಡಿ-ಆತಂಕಗಳಿಲ್ಲದಂತೆ ಯಶಸ್ವಿಯಾಗಿ ನಡೆಸಲು ಜಿಲ್ಲೆಯಲ್ಲಿ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಜಿ.ಪಂ.ಸಿಇಓ ಎಂ.ಎಲ್.ವೈಶಾಲಿ ತಿಳಿಸಿದರು.

ಮಂಗಳವಾರ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಕುರಿತಾದ ಪೂರ್ವಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಕಳೆದ ಬಾರಿಯೂ ಕೋವಿಡ್ ಹಿನ್ನೆಲೆಯಲ್ಲಿ ಎಸ್‍ಎಸ್‍ಎಲ್ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದ್ದೆವು. ಈ ಬಾರಿಯೂ ಯಶಸ್ವಿಯಾಗಿ ನಡೆಸಲಿದ್ದು ಮಕ್ಕಳು ನಿರಾತಂಕವಾಗಿ ಪರೀಕ್ಷೆ ಬರೆಯುವಂತಹ ವಾತಾವರಣ ನಿರ್ಮಿಸಲು ಎಲ್ಲ ಕ್ರಮ ವಹಿಸಲಾಗಿದೆ ಎಂದರು.

ಎಸ್‍ಎಸ್‍ಎಲ್‍ಸಿ ಪರೀಕ್ಷಾ ಮಂಡಳಿ ಮಾರ್ಗಸೂಚಿಯನುಸಾರ ಪ್ರತಿ ತಾಲ್ಲೂಕುವಾರು ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದ್ದು ಜಿಲ್ಲೆಯಲ್ಲಿ ಒಟ್ಟು 150 ಪರೀಕ್ಷೆಗಳನ್ನು ಗುರುತಿಸಲಾಗಿದೆ. ಪರೀಕ್ಷಾ ಮಂಡಳಿಯಿಂದ ನೀಡಲಾದ ಎಸ್.ಓ.ಪಿ(ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸಿಜರ್) ಅನುಸಾರ ಪರೀಕ್ಷಾ ಕೇಂದ್ರಗಳಲ್ಲಿ ಆಸನ ವ್ಯವಸ್ಥೆ, ವಿಶೇಷ ಕೊಠಡಿಗಳು, ಆರೋಗ್ಯ ತಪಾಸಣಾ ಕೌಂಟರ್‍ಗಳನ್ನು ತೆರೆಯಲು ಈಗಾಗಲೇ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img