Friday, July 30, 2021
Homeಸುದ್ದಿ ಜಾಲಕೇರಳದಲ್ಲಿ ಝಿಕಾ ವೈರಸ್‌ ಪ್ರಕರಣ ಹೆಚ್ಚಳ

ಇದೀಗ ಬಂದ ಸುದ್ದಿ

ಕೇರಳದಲ್ಲಿ ಝಿಕಾ ವೈರಸ್‌ ಪ್ರಕರಣ ಹೆಚ್ಚಳ

ಮಂಗಳೂರು: ಕೇರಳದಲ್ಲಿ ಝಿಕಾ ವೈರಸ್‌ ಹಾಗೂ ಡೆಲ್ಟಾ ಪ್ಲಸ್‌ ಪ್ರಕರಣಗಳು ವರದಿಯಾಗುತ್ತಿದ್ದು, ಕೇರಳದೊಂದಿಗೆ ಗಡಿ ಹಂಚಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದಲ್ಲಿ ತಪಾಸಣೆಯನ್ನು ಬಿಗಿಗೊಳಿಸಲಾಗಿದೆ. ಸದ್ಯ ಚೆಕ್‌ಪೋಸ್ಟ್‌ಗಳನ್ನು ಆರಂಭಿಸಲಾಗಿದ್ದು, ಜಿಲ್ಲೆಗೆ ಬರುವ ಪ್ರತಿಯೊಬ್ಬರ ತಪಾಸಣೆ ಆರಂಭಿಸಲಾಗಿದೆ.

ಕೇರಳ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿರುವುದರಿಂದ ಗೃಹ ಸಚಿವರ ನಿರ್ದೇಶನದಂತೆ ಕರ್ನಾಟಕ- ಕೇರಳದ ಗಡಿ ಭಾಗಗಳಲ್ಲಿ ಪ್ರಯಾಣಿಸುವವರ ತಪಾಸಣೆ ಬಿಗಿಗೊಳಿಸಲಾಗುತ್ತಿದೆ ಎಂದು ಡಿಸಿಪಿ ಹರಿರಾಂ ಶಂಕರ್ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ 2ನೇ ಅಲೆ ಸದ್ಯ ನಿಯಂತ್ರಣದಲ್ಲಿದೆ. ಆದರೆ ಕೇರಳದಲ್ಲಿ ಸೋಂಕು ಹೆಚ್ಚುತ್ತಿದ್ದು, ಝಿಕಾ ವೈರಸ್‌, ಡೆಲ್ಟಾ ಪ್ಲಸ್‌ ಪ್ರಕರಣಗಳು ಹೆಚ್ಚುತ್ತಿವೆ. ಸೋಂಕು ಹರಡುವುದನ್ನು ತಡೆಯಲು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ತಲಪಾಡಿ, ನೆತ್ತಿಲಪದವು, ನಾರ್ಯ ಕ್ರಾಸ್, ನಂದಾರ ಪಡ್ಪು, ಮುದುಂಗಾರು ಕಟ್ಟೆ, ತೌಡುಗೋಳಿಯಲ್ಲಿ ಚೆಕ್‌ಪೋಸ್ಟ್‌ಗಳನ್ನು ಹಾಕಲಾಗಿದ್ದು, ಸಿಬ್ಬಂದಿಯನ್ನೂ ಹೆಚ್ಚಿಸಲಾಗಿದೆ ಎಂದು ಹೇಳಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img