Thursday, July 29, 2021
Homeಸುದ್ದಿ ಜಾಲ38 ಕೋಟಿಗೂ ಅಧಿಕ ಮಂದಿಗೆ ಕೊರೊನಾವೈರಸ್ ಲಸಿಕೆ

ಇದೀಗ ಬಂದ ಸುದ್ದಿ

38 ಕೋಟಿಗೂ ಅಧಿಕ ಮಂದಿಗೆ ಕೊರೊನಾವೈರಸ್ ಲಸಿಕೆ

ನವದೆಹಲಿ, ಜುಲೈ 13: ಭಾರತದಲ್ಲಿ ಕೊರೊನಾವೈರಸ್ ಸೋಂಕಿನ ವಿರುದ್ಧ ಹೋರಾಟಕ್ಕೆ ಲಸಿಕೆ ಅಭಿಯಾನ ಆರಂಭಿಸಿ 178 ದಿನಗಳಾಗಿವೆ. ದೇಶದಲ್ಲಿ ಈವರೆಗೂ 38 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಲಸಿಕೆ ವಿತರಣೆ ಮಾಡಲಾಗಿದೆ.

ದೇಶದಲ್ಲಿ ಸೋಮವಾರ ರಾತ್ರಿ 7 ಗಂಟೆ ವೇಳೆಗೆ 37,03,423 ಮಂದಿ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ. ದೇಶದಲ್ಲಿ ಒಟ್ಟು 38,11,04,836 ಮಂದಿಗೆ ಕೊವಿಡ್-19 ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

18 ರಿಂದ 44 ವಯೋಮಾನದ 16,61,804 ಜನರಿಗೆ ಮೊದಲ ಡೋಸ್ ಹಾಗೂ 1,40,806 ಮಂದಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ದೇಶದಲ್ಲಿ ಇದೇ ವಯೋಮಾನದ 11,41,34,915 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 38,88,828 ಜನರು ಎರಡನೇ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img