Sunday, August 1, 2021
HomeಬೆಂಗಳೂರುSSLC ಪರೀಕ್ಷೆ ಬರೆಯಲು ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣ

ಇದೀಗ ಬಂದ ಸುದ್ದಿ

SSLC ಪರೀಕ್ಷೆ ಬರೆಯಲು ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣ

ಬೆಂಗಳೂರು : ಜುಲೈ 19 ಹಾಗೂ 22ರಂದು ಎಸ್​ಎಸ್​ಎಲ್​ಸಿ ಪರೀಕ್ಷೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬಸ್​ ಪ್ರಯಾಣ ಮಾಡಲು ಅನುಮತಿ ನೀಡಲಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಈ ಆದೇಶ ಹೊರ ಬಿದ್ದಿದೆ. ವಿದ್ಯಾರ್ಥಿಗಳು ತಮ್ಮ ಮನೆಯಿಂದ ಪರೀಕ್ಷಾ ಕೇಂದ್ರಕ್ಕೆ ಹೋಗಲು ಮತ್ತು ವಾಪಸ್ ಬರಲು ಅನುಮತಿ ನೀಡಲಾಗಿದೆ. ಇನ್ನು, ರಸ್ತೆ ಮಧ್ಯದಲ್ಲಿ ಪರೀಕ್ಷಾ ಕೇಂದ್ರಗಳು ಇದ್ದಲ್ಲಿ ಅಲ್ಲಿಯೂ ಸಹ ಕೋರಿಕೆಯ ನಿಲುಗಡೆಗೂ ಅವಕಾಶ ನೀಡಲಾಗಿದೆ. ವಿದ್ಯಾರ್ಥಿಗಳು ಬಸ್‌ನಲ್ಲಿ ಪ್ರಯಾಣ ಮಾಡುವಾಗ ಕಡ್ಡಾಯವಾಗಿ ಪರೀಕ್ಷಾ ಪ್ರವೇಶ ಪತ್ರ ಹೊಂದಿರಬೇಕು ಎಂದು ಸೂಚನೆ ನೀಡಲಾಗಿದೆ.

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ನಡೆಯುವ ಅವಧಿಯಲ್ಲಿ ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಕೇಂದ್ರಗಳವರೆಗೆ ನಿಗಮದ ಬಸ್‌ಗಳಲ್ಲಿ ಪ್ರಯಾಣಿಸಲು ಅನುಮತಿಸುವ ಬಗ್ಗೆ ಕೆಎಸ್ಆರ್​ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ ವಿಸ್ತೃತ ಆದೇಶ ನೀಡಿದ್ದಾರೆ.

2020-21ನೇ ಸಾಲಿನ ಕರ್ನಾಟಕದ ಎಸ್‌ಎಸ್‌ಎಲ್‌ಸಿ ಅಂತಿಮ ಪರೀಕ್ಷೆಗಳನ್ನು ಸರ್ಕಾರದ ಆದೇಶದಂತೆ ಜುಲೈ 19 ಮತ್ತು 22 ರಂದು ನಡೆಸಲು ತೀರ್ಮಾನಿಸಿದ್ದು, ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ನಡೆಯುವ ಅವಧಿಯಲ್ಲಿ ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಕೇಂದ್ರಗಳವರೆಗೆ ನಿಗಮದ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿಸುವಂತೆ ಕೋರಲಾಗಿತ್ತು ಎಂದಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img