Thursday, July 29, 2021
Homeಸುದ್ದಿ ಜಾಲಇಂಗ್ಲೆಂಡ್‌ನಲ್ಲಿ ಕೋವಿಡ್‌ ನಿರ್ಬಂಧಗಳು ಜುಲೈ 19ಕ್ಕೆ ಅಂತ್ಯ

ಇದೀಗ ಬಂದ ಸುದ್ದಿ

ಇಂಗ್ಲೆಂಡ್‌ನಲ್ಲಿ ಕೋವಿಡ್‌ ನಿರ್ಬಂಧಗಳು ಜುಲೈ 19ಕ್ಕೆ ಅಂತ್ಯ

ಲಂಡನ್‌: ಕೋವಿಡ್‌-19 ನಿಯಂತ್ರಣದ ಸಲುವಾಗಿ ದೇಶದಲ್ಲಿ ಹೇರಿರುವ ಎಲ್ಲ ನಿರ್ಬಂಧಗಳು ಜುಲೈ 19ಕ್ಕೆ ಕೊನೆಯಾಗಲಿವೆ ಎಂದು ಬ್ರಿಟನ್‌ ಪ್ರಧಾನಿ ಬೋರಿಸ್‌ ಜಾನ್ಸನ್‌ ಸೋಮವಾರ ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿರುವ ಜಾನ್ಸನ್‌, ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್‌ ಧರಿಸುವುದು, ಅಂತರ ಕಾಯ್ದುಕೊಳ್ಳುವ ನಿಯಮ ಮತ್ತು ಮನೆಯಿಂದಲೇ ಕೆಲಸ ಮಾಡುವ ಶಿಫಾರಸುಗಳನ್ನು ತೆಗೆದುಹಾಕಲಾಗುವುದು ಎಂದು ತಿಳಿಸಿದ್ದಾರೆ.

ಕೊರೊನಾವೈರಸ್‌ ಸೋಂಕು ಹೊಂದಿರುವ ಜನರಲ್ಲಿ ಗಂಭೀರ ರೋಗ ಲಕ್ಷಣಗಳು ಕಾಣಿಸಿಕೊಳ್ಳದಂತೆ ತಡೆಯಲು ಲಸಿಕೆ ನೆರವಾಗಿದೆ ಎಂದೂ ಇದೇ ವೇಳೆ ಹೇಳಿದ್ದಾರೆ.

ಸೋಂಕು ಪ್ರಕರಣಗಳು ಹಾಗೂ ಸಾವಿನ ಸಂಖ್ಯೆ ಏರಿಕೆಯಾಗಬಹುದು. ಆದರೂ, ಕಳೆದ ವರ್ಷ ಸಾಂಕ್ರಾಮಿಕ ಉಲ್ಬಣವಾಗಿದ್ದ ಸಮಯಕ್ಕೆ ಹೋಲಿಸಿದರೆ ತೀರಾ ಕೆಳ ಮಟ್ಟದಲ್ಲಿರಲಿವೆ ಎಂದೂ ಬ್ರಿಟನ್‌ ಪ್ರಧಾನಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ʼನಾವು ತಕ್ಷಣವೇ ಸಾಮಾನ್ಯ ಸ್ಥಿತಿಗೆ ಮರಳಲಾಗದು. ಜುಲೈ 19ರಿಂದ ಮೊದಲಿನಂತೆ ಜೀವನ ನಡೆಸಲಾರಂಭಿಸಲಿದ್ದೇವೆ. ಸಾಂಕ್ರಾಮಿಕ ಇನ್ನೂ ಮುಗಿದಿಲ್ಲ, ಜನರು ಜವಾಬ್ದಾರಿಯುತವಾಗಿ ಮತ್ತು ಎಚ್ಚರಿಕೆಯಿಂದ ವರ್ತಿಸಬೇಕುʼ ಎಂದೂ ಮನವಿ ಮಾಡಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img