Friday, July 23, 2021
Homeಸುದ್ದಿ ಜಾಲಒಂದು ವಾರ ಮಂಗಳೂರು - ಕೇರಳ ಬಸ್ ಸಂಚಾರ ನಿರ್ಬಂಧ

ಇದೀಗ ಬಂದ ಸುದ್ದಿ

ಒಂದು ವಾರ ಮಂಗಳೂರು – ಕೇರಳ ಬಸ್ ಸಂಚಾರ ನಿರ್ಬಂಧ

ಮಂಗಳೂರು : ಕೇರಳ ರಾಜ್ಯದಲ್ಲಿ ಕೊರೋನಾ ವೈರಸ್ ಜೊತೆಗೆ ಇದೀಗ ಝೀಕಾ ವೈರಸ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ-ಕೇರಳ ಗಡಿಯಲ್ಲಿ ಕಟ್ಟೆಚ್ಚರವನ್ನು ವಹಿಸಲಾಗಿದೆ.

ಕೇರಳದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಮತ್ತೆ ಒಂದು ವಾರಗಳ ಕಾಲ ಸರ್ಕಾರಿ ಬಸ್ ಸಂಚಾರವನ್ನು ಆರಂಭಿಸುವುದು ಬೇಡ ಎಂದು ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿಯ ನೇತ್ರಾವತಿ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಈ ಕುರಿತು ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಭೆಯಲ್ಲಿ ಪಾಲ್ಗೊಂಡಿದ್ದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img