Sunday, August 1, 2021
Homeಸುದ್ದಿ ಜಾಲಆಕ್ಸಿಜನ್ ಟ್ಯಾಂಕ್ ಸ್ಫೋಟ

ಇದೀಗ ಬಂದ ಸುದ್ದಿ

ಆಕ್ಸಿಜನ್ ಟ್ಯಾಂಕ್ ಸ್ಫೋಟ

ನಾಸಿರಿಯಾ (ಇರಾಕ್​): ಇರಾಕ್‌ನ ದಕ್ಷಿಣ ನಗರವಾದ ನಾಸಿರಿಯಾದ ಕೋವಿಡ್​ ಆಸ್ಪತ್ರೆಯಲ್ಲಿ ಭಾರಿ ಅವಘಡ ಸಂಭವಿಸಿದೆ. ಆಕ್ಸಿಜನ್ ಟ್ಯಾಂಕ್ ಸ್ಫೋಟಗೊಂಡ ಪರಿಣಾಮ ಸುಮಾರು 50 ಮಂದಿ ಸಾವನ್ನಪ್ಪಿದ್ದಾರೆ. ಅಷ್ಟೇ ಅಲ್ಲದೆ, ಅನೇಕರು ಗಾಯಗೊಂಡಿದ್ದಾರೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ತಿಳಿಸಿದ್ದಾರೆ.

ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿದ ಪ್ರಧಾನಿ ಮುಸ್ತಫಾ ಅಲ್-ಕಧಿಮಿ, ಹಿರಿಯ ಸಚಿವರೊಂದಿಗೆ ತುರ್ತು ಸಭೆ ನಡೆಸಿ ನಾಸಿರಿಯಾದಲ್ಲಿ ಆರೋಗ್ಯ ಮತ್ತು ನಾಗರಿಕ ರಕ್ಷಣಾ ವ್ಯವಸ್ಥಾಪಕರನ್ನು ಅಮಾನತುಗೊಳಿಸಿ ಬಂಧಿಸುವಂತೆ ಆದೇಶ ಹೊರಡಿಸಿದ್ದಾರೆ ಎಂದು ಅವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಆಸ್ಪತ್ರೆಯು ಹೊಗೆಯಿಂದ ಆವರಿಸಿದ್ದು, ವಾರ್ಡ್​ಗಳಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ. ಸದ್ಯ ಬೆಂಕಿಯನ್ನು ನಿಯಂತ್ರಣಕ್ಕೆ ತಂದ ಅಗ್ನಿಶಾಮಕ ದಳ ಜನರ ರಕ್ಷಣೆಗೆ ಮುಂದಾಗಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img