Friday, July 30, 2021
Homeಚಿಕ್ಕಬಳ್ಳಾಪುರನಂದಿಗಿರಿಧಾಮದಲ್ಲಿ ವಾರಾಂತ್ಯದಲ್ಲಿ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ

ಇದೀಗ ಬಂದ ಸುದ್ದಿ

ನಂದಿಗಿರಿಧಾಮದಲ್ಲಿ ವಾರಾಂತ್ಯದಲ್ಲಿ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ

ಚಿಕ್ಕಬಳ್ಳಾಪುರ: ಕೋವಿಡ್ ಸೋಂಕು ನಿಯಂತ್ರಿಸುವ ಸಲುವಾಗಿ ಮತ್ತು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರವಾಸಿಗರ ತಾಣ ನಂದಿಗಿರಿಧಾಮದಲ್ಲಿ ಜುಲೈ 12 ರಿಂದ ಮುಂದಿನ ಆದೇಶ ವರೆಗೆ ಪ್ರತಿವಾರಾಂತ್ಯ ಅಂದರೆ ಶುಕ್ರವಾರ ಸಂಜೆ 6 ಗಂಟೆಯಿಂದ ಸೋಮವಾರ ಬೆಳಗ್ಗೆ 6:00 ವರೆಗೆ ಪ್ರವಾಸಿಗರು ಮತ್ತು ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ರಾಜ್ಯದಲ್ಲಿ ಅನ್ ಲಾಕ್ 3 ಘೋಷಿಸಿ ವ್ಯಾಪಾರ ವಹಿವಾಟಿಗೆ ಅವಕಾಶ ಕಲ್ಪಿಸಿದ ಸರ್ಕಾರ ಪ್ರವಾಸಿ ತಾಣಗಳಲ್ಲಿ ಸಹ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಿ ಸಾರ್ವಜನಿಕರಿಗೆ ಪ್ರವೇಶ ಮುಕ್ತಗೊಳಿಸಲಾಗಿತ್ತು. ಆದರೆ ಜಿಲ್ಲೆಯ ಪ್ರವಾಸಿ ತಾಣ ನಂದಿಗಿರಿಧಾಮದಲ್ಲಿ ವಾರಾಂತ್ಯದ ಶನಿವಾರ ಮತ್ತು ಭಾನುವಾರದಂದು ಜನಸಾಗರವೇ ಹರಿದು ಬಂದಿತ್ತು. ಇದರಿಂದ ಕೋವಿಡ್ ಸೋಂಕು ಹರಡುವ ಆತಂಕ ಮತ್ತು ಭೀತಿಯನ್ನು ಸಾರ್ವಜನಿಕರು ವ್ಯಕ್ತಪಡಿಸಿದ್ದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img