Sunday, August 1, 2021
Homeಸುದ್ದಿ ಜಾಲದೇಶದಲ್ಲಿ ಕಳೆದ 24 ಗಂಟೆಯಲ್ಲಿ 38,792 ಹೊಸ ಕೇಸ್​ ಪತ್ತೆ

ಇದೀಗ ಬಂದ ಸುದ್ದಿ

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 38,792 ಹೊಸ ಕೇಸ್​ ಪತ್ತೆ

ನವದೆಹಲಿ: ದೇಶಾದ್ಯಂತ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 38,792 ಕೊರೊನಾ ಕೇಸ್​ಗಳು ಪತ್ತೆಯಾಗಿದ್ದು, ಒಟ್ಟು 41,000 ಮಂದಿ ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಭಾರತದಲ್ಲಿ ಈವರೆಗೆ 3,01,04,720 ಮಂದಿ ಚೇತರಿಸಿಕೊಂಡಿದ್ದಾರೆ. ಇಲ್ಲಿಯ ತನಕ 4,11,408 ಮಂದಿ ಸೋಂಕಿತರು ಕೋವಿಡ್​ ಮಹಾಮಾರಿಗೆ ಬಲಿಯಾಗಿದ್ದಾರೆ. ಕಳೆದ 24 ಗಂಟೆಯಲ್ಲಿ ಸೋಂಕಿಗೆ 624 ಮಂದಿ ಕೊನೆಯುಸಿರೆಳೆದಿದ್ದಾರೆ.

ದೇಶದಲ್ಲಿ ಇಲ್ಲಿಯವರೆಗೆ 3,09,46,074 ಕೋವಿಡ್​ ಪ್ರಕರಣಗಳು ದಾಖಲಾಗಿವೆ. ಸದ್ಯ ದೇಶಾದ್ಯಂತ 4,29,946 ಕೇಸ್​ಗಳು ಸಕ್ರಿಯವಾಗಿವೆ. ಇದುವರೆಗೆ 38,76,97,935 ಮಂದಿಗೆ ವ್ಯಾಕ್ಸಿನ್​ ನೀಡಲಾಗಿದೆ. ಕಳೆದ 24 ಗಂಟೆಗಳಲ್ಲಿ 37,14,441 ಮಂದಿಗೆ ಲಸಿಕೆ ನೀಡಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ICMR)​ ತಿಳಿಸಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img