Thursday, July 29, 2021
Homeಸುದ್ದಿ ಜಾಲಎಲ್ಇಟಿ ಕಮಾಂಡರ್ ಸೇರಿ ಮೂವರು ಉಗ್ರರನ್ನು ಹೊಡೆದುರುಳಿಸಿದ ಸೇನೆ

ಇದೀಗ ಬಂದ ಸುದ್ದಿ

ಎಲ್ಇಟಿ ಕಮಾಂಡರ್ ಸೇರಿ ಮೂವರು ಉಗ್ರರನ್ನು ಹೊಡೆದುರುಳಿಸಿದ ಸೇನೆ

ಪುಲ್ವಾಮಾ : ದಕ್ಷಿಣ ಕಾಶ್ಮೀರದ ಪುಲ್ವಾಮಾದಲ್ಲಿ ಭದ್ರತಾ ಪಡೆ ನಡೆಸಿದ ಏನ್’ ಕೌಂಟರ್ ನಲ್ಲಿ ಮೂವರು ಉಗ್ರರು ಸಾವನ್ನಪ್ಪಿದ್ದಾರೆ.

ಓರ್ವ ಭಯೋತ್ಪಾದಕನನ್ನು ಪಾಕಿಸ್ತಾನಿ ಲಷ್ಕರ್-ಎ-ತೈಬಾ ಕಮಾಂಡರ್ ಐಜಾಜ್ ಅಲಿಯಾಸ್ ಅಬು ಹುರೈರಾ ಎಂದು ಗುರುತಿಸಲಾಗಿದ್ದರೆ, ಉಳಿದ ಇಬ್ಬರು ಅಪರಿಚಿತ ಸ್ಥಳೀಯರು ಎಂದು ತಿಳಿದು ಬಂದಿದೆ.

ಕಾಶ್ಮೀರ ವಲಯ ಪೊಲೀಸರ ಪ್ರಕಾರ, ಶಸ್ತ್ರಾಸ್ತ್ರ ಮತ್ತು ಮದ್ದುಗುಂಡು ಸೇರಿದಂತೆ ಹಲವು ವಸ್ತುಗಳನ್ನು ಭದ್ರತಾ ಪಡೆಗಳು ವಶಪಡಿಸಿಕೊಂಡಿವೆ.ಪೊಲೀಸ್, ಸೇನೆ ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆಯ ಜಂಟಿ ತಂಡವು ಈ ಪ್ರದೇಶವನ್ನು ಸುತ್ತುವರಿದಾಗ ಗುಂಡಿನ ಚಕಮಕಿ ನಡೆದಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img