Friday, July 30, 2021
Homeಜಿಲ್ಲೆಬೆಂಗಳೂರುಡ್ಯಾಮೇಜ್ ಕಂಟ್ರೋಲ್ ಗಾಗಿ ಮಠಗಳಿಗೆ ಬಿಎಸ್ ವೈ ಆಪ್ತರ ರೌಂಡ್ಸ್

ಇದೀಗ ಬಂದ ಸುದ್ದಿ

ಡ್ಯಾಮೇಜ್ ಕಂಟ್ರೋಲ್ ಗಾಗಿ ಮಠಗಳಿಗೆ ಬಿಎಸ್ ವೈ ಆಪ್ತರ ರೌಂಡ್ಸ್

ಬೆಂಗಳೂರು: ಆಡಳಿತ ಪಕ್ಷದ ಸಚಿವರು -ಶಾಸಕರ ಗುದ್ದಾಟದಿಂದ ಹಾಳಾಗಿರುವ ಬಿಜೆಪಿ ಸರ್ಕಾರದ ವರ್ಚಸ್ಸನ್ನು ಮರು ಸ್ಥಾಪಿಸಲು ಸಿಎಂ ಯಡಿಯೂರಪ್ಪ ಆಪ್ತ ಬಣದಲ್ಲಿ ಗುರುತಿಸಿಕೊಂಡಿರುವ ಕೆಲಸ ಸಚಿವರು ಉಂಟಾಗಿರುವ ಹಾನಿಯನ್ನು ಸರಿ ಮಾಡುವ ಪ್ರಯತ್ನಕ್ಕೆ ಮುಂದಾಗಿದ್ದಾರೆ.

ಈ ನಿಟ್ಟಿನಲ್ಲಿ ಯಡಿಯೂರಪ್ಪ ಸಂಪುಟದ ಕೆಲವು ಸಚಿವರು ರಾಜ್ಯದ ಪ್ರಮುಖ ಮಠಗಳಿಗೆ ಭೇಟಿ ನೀಡಿ ಸರ್ಕಾರದ ವರ್ಚಸ್ಸು ಹಾಗೂ ಘನತೆಯನ್ನು ಮರು ಸ್ಥಾಪಿಸಲು ಪ್ರಯತ್ನಿಸುತ್ತಿದ್ದಾರೆ.

ಇತ್ತೀಚೆಗೆ ಕಂದಾಯ ಸಚಿವ ಆರ್.ಅಶೋಕ್ ಮತ್ತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಬೆಂಗಳೂರಿನಲ್ಲಿರುವ ಆದಿ ಚುಂಚನಗಿರಿ ಮಠಕ್ಕೆ ಭೇಟಿ ನೀಡಿದ್ದರು, ಅದೇ ರೀತಿ, ಬುಧವಾರ ಮೈಸೂರಿನ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹಾಗೂ ಚಿತ್ರದುರ್ಗದ ಮುರುಘಾಮಠಕ್ಕೆ ಭೇಟಿ ನೀಡಲಿದ್ದಾರೆ.

ಇದರ ಜೊತೆಗೆ ಮುಂದಿನ ವಾರದಲ್ಲಿ ಉಡುಪಿ ಮತ್ತು ಉತ್ತರ ಕರ್ನಾಟಕದ ಕೆಲವು ಮಠಗಳಿಗೂ ಸಹ ಭೇಟಿ ನೀಡಲಿದ್ದಾರೆ. ಯಾವುದೇ ಜಾತಿ ಮತ ನೋಡದೇ ರಾಜ್ಯದಲ್ಲಿರುವ ಎಲ್ಲಾ ಮಠಗಳಿಗೂ ಭೇಟಿ ನೀಡುವುದಾಗಿ ಇದರ ಮೂಲಕ ಜನರನ್ನು ತಲುಪುವುದಾಗಿ ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img