Friday, July 23, 2021
Homeಸುದ್ದಿ ಜಾಲಅಮೆರಿಕದಲ್ಲಿ ಕೋವಿಡ್ ಪ್ರಕರಣಗಳು ಮತ್ತೆ ಏರಿಕೆ

ಇದೀಗ ಬಂದ ಸುದ್ದಿ

ಅಮೆರಿಕದಲ್ಲಿ ಕೋವಿಡ್ ಪ್ರಕರಣಗಳು ಮತ್ತೆ ಏರಿಕೆ

ವಾಷಿಂಗ್ಟನ್: ಕೋವಿಡ್‌ ವಿರುದ್ಧದ ಯುದ್ಧವನ್ನು ಇನ್ನೇನು ಗೆದ್ದುಬಿಟ್ಟೆವು ಎಂಬ ವಿಶ್ವಾಸದಲ್ಲಿದ್ದ ಅಮೆರಿಕಗೆ ಕೊರೊನಾ ಮತ್ತೆ ಶಾಕ್ ನೀಡಿದ್ದು, ಮತ್ತೆ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ.

ವೇಗವಾಗಿ ಹರಡುವ ಡೆಲ್ಟಾ ರೂಪಾಂತರ ತಳಿಯಿಂದಾಗಿ ದೈನಂದಿನ ಪ್ರಕರಣಗಳು ಮೂರು ವಾರಕ್ಕೆ ದ್ವಿಗುಣಗೊಳ್ಳುತ್ತಿವೆ.

ಮೂರು ವಾರಗಳ ಹಿಂದೆ 11,300 ರಷ್ಟಿದ್ದ ದಿನದ ಸರಾಸರಿ ಕೋವಿಡ್ ಪ್ರಕರಣಗಳ ಸಂಖ್ಯೆ ಜುಲೈ 12ಕ್ಕೆ 23,600 ಕ್ಕೆ ಏರಿದೆ ಎಂದು ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯದ ಅಂಕಿ ಅಂಶಗಳು ತಿಳಿಸಿವೆ.

ಮೈನೆ ಮತ್ತು ದಕ್ಷಿಣ ಡಕೋತಾ ಈ ಎರಡು ರಾಜ್ಯಗಳಲ್ಲಿ ಎರಡು ವಾರಗಳಲ್ಲಿ ಪ್ರಕರಣಗಳ ಸಂಖ್ಯೆ ಭಾರೀ ಪ್ರಮಾಣದಲ್ಲಿ ಹೆಚ್ಚಾಗಿದೆ ಎಂದು ವರದಿ ತಿಳಿಸಿದೆ.

‘ಜುಲೈನಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಬಹುದು ಎಂದು ನಾವು ನಿರೀಕ್ಷಿಸಿದ್ದೆವು. ಇದು ಖಂಡಿತಾ ಕಾಕತಾಳೀಯವಲ್ಲ’ ಎಂದು ವಾಷಿಂಗ್ಟನ್ ಯೂನಿವರ್ಸಿಟಿಯ ಸ್ಕೂಲ್ ಆಫ್ ಮೆಡಿಸಿನ್‌ನ ಸಾಂಕ್ರಾಮಿಕ-ರೋಗ ವಿಭಾಗದ ಸಹ ನಿರ್ದೇಶಕ ಡಾ. ಬಿಲ್ ಪೌಡರ್ಲಿ ಹೇಳಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img