Friday, July 30, 2021
Homeಬೆಂಗಳೂರುವಿಜಯಪುರ-ಬಾಗಲಕೋಟೆ ಜಿಲ್ಲೆಗೆ ಡಿಕೆಶಿ ಪ್ರವಾಸ

ಇದೀಗ ಬಂದ ಸುದ್ದಿ

ವಿಜಯಪುರ-ಬಾಗಲಕೋಟೆ ಜಿಲ್ಲೆಗೆ ಡಿಕೆಶಿ ಪ್ರವಾಸ

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಎರಡು ದಿನ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಕಾಂಗ್ರೆಸ್ ಪಕ್ಷದ ಸಂಘಟನೆ ಹಾಗೂ ಹಿಂದುಳಿದ ವರ್ಗಗಳ ಕುಂದುಕೊರತೆ ಆಲಿಸುವ ಕಾರ್ಯಕ್ಕಾಗಿ ಜುಲೈ 17 ಮತ್ತು 18ರಂದು ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗೆ ತೆರಳಲಿದ್ದಾರೆ.

ಈಗಾಗಲೇ ಕಳೆದವಾರ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಿಗೆ ಭೇಟಿ ಕೊಟ್ಟು ಬಂದಿರುವ ಅವರು, ಇಂದು ಬಾಗೇಪಲ್ಲಿಯಲ್ಲಿ ಹಮ್ಮಿಕೊಂಡಿರುವ ಆಹಾರದ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ವಿಜಯಪುರ ಹಾಗೂ ಬಾಗಲಕೋಟೆ ಪ್ರವಾಸವನ್ನು ಜುಲೈ 17ರಂದು ಬೆಳಗ್ಗೆ ಆರಂಭಿಸಲಿದ್ದಾರೆ. ಬೆಂಗಳೂರಿನಿಂದ ಕಲಬುರ್ಗಿಗೆ ವಿಮಾನದ ಮೂಲಕ ತೆರಳಲಿದ್ದಾರೆ.

ಕಲಬುರ್ಗಿಯಿಂದ ವಿಜಯಪುರ ಜಿಲ್ಲೆಯ ಸಿಂದಗಿ ವಿಧಾನಸಭಾ ಕ್ಷೇತ್ರಕ್ಕೆ ತೆರಳಿ ಅಲ್ಲಿ ಬೆಳಗ್ಗೆ 11 ಗಂಟೆಗೆ ಹಮ್ಮಿಕೊಂಡಿರುವ ದಲಿತ ಸಮುದಾಯದ ಕುಂದುಕೊರತೆಗಳ ಸಂವಾದ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಈ ಕಾರ್ಯಕ್ರಮ ಮುಗಿಸಿ ದೇವರಹಿಪ್ಪರಗಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಿಂದಗಿಯ ಪಡಗನೂರು ತಾಂಡಾಗೆ ತೆರಳಿ ಅಲ್ಲಿನ ತಾಂಡಾದ ಲಂಬಾಣಿ ಸಮುದಾಯದ ನಾಗರಿಕರ ಕುಂದು ಕೊರತೆ ಆಲಿಸುವರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img