Thursday, July 29, 2021
Homeಜಿಲ್ಲೆಬೆಂಗಳೂರುವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಇದೀಗ ಬಂದ ಸುದ್ದಿ

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಬೆಂಗಳೂರು : ಕನ್ನಡ ನೆಲದಲ್ಲಿರುವ ಯಾವುದೇ ಪಠ್ಯಕ್ರಮದ ಶಾಲೆಗಳಲ್ಲಿ ಕನ್ನಡ ಭಾಷೆಯನ್ನು ಒಂದು ಭಾಷೆಯನ್ನಾಗಿ ಕಲಿಸುವ ಸಂಬಂಧದ ಕನ್ನಡ ಕಲಿಕಾ ಅಧಿನಿಯಮ-2015ರ ಕಾಯ್ದೆ ಅನುಷ್ಠಾನದಲ್ಲಿ ಯಾವುದೇ ರಾಜಿಯೇ ಇಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.

ಹೊರನಾಡು ಕನ್ನಡಿಗರ ಒಂದು ವರ್ಗ ರಾಜ್ಯದಲ್ಲಿ ಕನ್ನಡವನ್ನು ಒಂದು ಭಾಷೆಯನ್ನಾಗಿ ಕಲಿಸುವುದರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಆರಂಭಿಸಿದೆ ಎಂಬ ಹಿನ್ನೆಲೆಯಲ್ಲಿ ಅಧಿನಿಯಮ ಅನುಷ್ಠಾನಕ್ಕೆ ಕಟ್ಟುನಿಟ್ಟಿನ ಕ್ರಮ ವಹಿಸಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಬುಧವಾರ ತಮ್ಮನ್ನು ಭೇಟಿ ಮಾಡಿ ಮನವಿ ಮಾಡಿದ ನಂತರ ಮಾತನಾಡಿದ ಸಚಿವರು, ರಾಜ್ಯದಲ್ಲಿರುವ ಯಾವುದೇ ಪಠ್ಯಕ್ರಮದ ಶಾಲೆಗಳೇ ಆಗಲಿ ಕನ್ನಡವನ್ನು ಕಡ್ಡಾಯವಾಗಿ ಪ್ರಥಮ ಇಲ್ಲವೇ ದ್ವಿತೀಯ ಭಾಷೆಯನ್ನಾಗಿ ಕಲಿಸುವುದು ಕಡ್ಡಾಯವಾಗಿದ್ದು, ಸರ್ಕಾರ ಈ ಕುರಿತು ಕಟ್ಟುನಿಟ್ಟಿನ ಕ್ರಮಗಳನ್ನು ವಹಿಸಲಿದೆ ಎಂದು ಹೇಳಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img