Sunday, August 1, 2021
Homeಸುದ್ದಿ ಜಾಲಜೂ.18ರವರೆಗೆ ರಾಜ್ಯದಲ್ಲಿ ಭಾರೀ ಮಳೆ

ಇದೀಗ ಬಂದ ಸುದ್ದಿ

ಜೂ.18ರವರೆಗೆ ರಾಜ್ಯದಲ್ಲಿ ಭಾರೀ ಮಳೆ

ಪೂರ್ವ ಅರಬ್ಬಿ ಸಮುದ್ರ ಹಾಗೂ ಕಚ್ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯಾದಾದ್ಯಂತ ಇನ್ನೂ ನಾಲ್ಕು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಜೂ 18ರವರೆಗೆ ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿಯಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿಎಸ್​ ಪಾಟೀಲ್​ ತಿಳಿಸಿದ್ದಾರೆ. ಈಗಾಗಲೇ ಉತ್ತರ ಕನ್ನಡ, ದಕ್ಷಿಣ ಕನ್ನಡ, ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ರೆಡ್, ಯೆಲ್ಲೋ, ಅರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲೂ ಕೂಡ ಇನ್ನೆರಡು ದಿನ ಭಾರೀ ಬಿರುಗಾಳಿ ಸಹಿತ ಮಳೆಯಾಗಲಿದೆ.

ಉತ್ತರ ಕನ್ನಡ. ಉಡುಪಿ, ದಕ್ಷಿಣ ಕನ್ನಡ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದ್ದು, ಜೂ. 16ರಂದು ರೆಡ್​ ಅಲರ್ಟ್​ ಘೋಷಣೆ ಮಾಡಲಾಗಿದೆ. ಜೂ. 14, 15 ಮತ್ತು 17ರಂದು ಈ ಪ್ರದೇಶಗಳಲ್ಲಿ ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ. ಕರಾವಳಿ ಪ್ರದೇಶದ ಮೀನುಗಾರರಿಗೂ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img