Friday, July 23, 2021
Homeದೆಹಲಿಮಾರುಕಟ್ಟೆಗಳಲ್ಲಿ ಕೋವಿಡ್ ನಿಯಮ ಉಲ್ಲಂಘನೆ

ಇದೀಗ ಬಂದ ಸುದ್ದಿ

ಮಾರುಕಟ್ಟೆಗಳಲ್ಲಿ ಕೋವಿಡ್ ನಿಯಮ ಉಲ್ಲಂಘನೆ

ನವದೆಹಲಿ: ಗಿರಿಧಾಮಗಳು, ಮಾರುಕಟ್ಟೆ ಪ್ರದೇಶಗಳು ಸೇರಿದಂತೆ ದೇಶದ ವಿವಿಧೆಡೆ ಕೋವಿಡ್ -19 ನಿಯಮಗಳನ್ನು ಉಲ್ಲಂಘಿಸಲಾಗುತ್ತಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಗೃಹಸಚಿವಾಲಯವು ಬುಧವಾರ ಸೂಚನೆ ನೀಡಿದೆ.

ಈ ಬಗ್ಗೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಗಳಿಗೆ ಪತ್ರ ಬರೆದಿರುವ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಅವರು, ‘ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲೂ ಕೋವಿಡ್ ನಿಯಮಗಳನ್ನು ಪಾಲಿಸುತ್ತಿಲ್ಲ. ಗಿರಿಧಾಮಗಳು ಮತ್ತು ಮಾರುಕಟ್ಟೆ ಪ್ರದೇಶಗಳಲ್ಲಿ ಜನರು ಭಾರಿ ಸಂಖ್ಯೆಯಲ್ಲಿ ಗುಂಪುಗೂಡುತ್ತಿದ್ದು, ದೈಹಿಕ ಅಂತರವನ್ನೇ ಮರೆತಿದ್ದಾರೆ. ಕೋವಿಡ್‌ನ 2ನೇ ಅಲೆ ಇನ್ನೂ ಮುಕ್ತಾಯವಾಗಿಲ್ಲ ಎಂಬುದನ್ನು ಪ್ರತಿಯೊಬ್ಬರೂ ನೆನಪಿನಲ್ಲಿಡಬೇಕು. ಕೋವಿಡ್‌ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸಬೇಕು’ ಎಂದು ಎಚ್ಚರಿಕೆ ನೀಡಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img