Friday, July 23, 2021
Homeಜಿಲ್ಲೆಶಿವಮೊಗ್ಗಶಿವಮೊಗ್ಗ ಜಿಲ್ಲೆಯಾದ್ಯಂತ ಮಳೆಯಬ್ಬರ

ಇದೀಗ ಬಂದ ಸುದ್ದಿ

ಶಿವಮೊಗ್ಗ ಜಿಲ್ಲೆಯಾದ್ಯಂತ ಮಳೆಯಬ್ಬರ

ಶಿವಮೊಗ್ಗ, ಜುಲೈ 14: ಕಳೆದ ಮೂರು ದಿನದಿಂದ ಶಿವಮೊಗ್ಗ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ವರ್ಷಧಾರೆಯಿಂದಾಗಿ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ನದಿ, ಹಳ್ಳ, ಕೊಳ್ಳಗಳಲ್ಲಿ ಮತ್ತೆ ನೀರಿನ ಪ್ರಮಾಣ ಹೆಚ್ಚಳವಾಗುತ್ತಿದೆ.

ಕಳೆದ 24 ಗಂಟೆ ಅವಧಿಯಲ್ಲಿ ಶಿವಮೊಗ್ಗ ತಾಲ್ಲೂಕಿನಲ್ಲಿ 18 ಮಿ.ಮೀ ಮಳೆಯಾಗಿದೆ. ಭದ್ರಾವತಿಯಲ್ಲಿ 48.20 ಮಿ.ಮೀ, ತೀರ್ಥಹಳ್ಳಿಯಲ್ಲಿ 79.60 ಮಿ.ಮೀ, ಸಾಗರದಲ್ಲಿ 70.80 ಮಿ.ಮೀ, ಶಿಕಾರಿಪುರದಲ್ಲಿ 27 ಮಿ.ಮೀ, ಸೊರಬದಲ್ಲಿ 29.20 ಮಿ.ಮೀ, ಹೊಸನಗರದಲ್ಲಿ 142.40 ಮಿ.ಮೀ ಮಳೆಯಾಗಿದೆ. ಒಟ್ಟಾರೆ ಶಿವಮೊಗ್ಗ ಜಿಲ್ಲೆಯಲ್ಲಿ ಸರಾಸರಿ 59.31 ಮಿ.ಮೀ ಮಳೆಯಾಗಿದೆ.

ಮಳೆ ಪ್ರಮಾಣ ಹೆಚ್ಚಳ ಆಗಿರುವುದರಿಂದ ನದಿಗಳ ನೀರಿನ ಹರಿವು ಹೆಚ್ಚಳವಾಗಿದೆ. ಜಲಾಶಯಗಳ ಒಳ ಹರಿವು ಪ್ರಮಾಣದಲ್ಲಿ ಏರಿಕೆಯಾಗಿದೆ. ಲಿಂಗನಮಕ್ಕಿ ಜಲಾಶಯಕ್ಕೆ 33,331 ಕ್ಯೂಸೆಕ್ ಒಳ ಹರಿವು ಇದೆ. ಹಾಗಾಗಿ ಜಲಾಶಯದ ನೀರಿನ ಮಟ್ಟ 1786.05 ಅಡಿಗೆ ಏರಿಕೆಯಾಗಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img