Friday, July 30, 2021
Homeಸುದ್ದಿ ಜಾಲಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ

ಇದೀಗ ಬಂದ ಸುದ್ದಿ

ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ

ನವದೆಹಲಿ : ಕೇಂದ್ರ ಸರ್ಕಾರಿ ನೌಕರರಿಗೆ ನೀಡಲಾಗುವ ತುಟ್ಟಿಭತ್ಯೆಯನ್ನು (ಡಿಎ) ಶೇಕಡಾ 17 ರಿಂದ ಶೇಕಡಾ 28ಕ್ಕೆ ಹೆಚ್ಚಿಸಲು ಸರ್ಕಾರ ಬುಧವಾರ ಅನುಮೋದನೆ ನೀಡಿದೆ. ಕಳೆದ ವರ್ಷ ಡಿಎಯನ್ನು ತಡೆಹಿಡಿದ ನಂತರ ಕೇಂದ್ರ ಸಚಿವ ಸಂಪುಟವು ಡಿಎಯನ್ನು ಹೆಚ್ಚಿಸುವ ನಿರ್ಧಾರ ಕೈಗೊಂಡಿದೆ ಎಂದು ಮೂಲಗಳು ಖಚಿತಪಡಿಸಿವೆ. ಈ ಬೆಳವಣಿಗೆಯು ಹಲವು ತಿಂಗಳುಗಳಿಂದ ಘೋಷಣೆಗಾಗಿ ಕಾಯುತ್ತಿರುವ ಲಕ್ಷಾಂತರ ಕೇಂದ್ರ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿಯನ್ನು ಕೇಂದ್ರ ಸರ್ಕಾರ ಈ ಮೂಲಕ ನೀಡಿದೆ.

ಏಳನೇ ಕೇಂದ್ರ ವೇತನ ಆಯೋಗದ (7ನೇ ಸಿಪಿಸಿ) ಅಡಿಯಲ್ಲಿ ತುಟ್ಟಿಭತ್ಯೆ ಪ್ರಯೋಜನಗಳನ್ನು ಜುಲೈನಲ್ಲಿ ಪುನಃಸ್ಥಾಪಿಸಲಾಗುವುದು ಎಂದು ಹಲವಾರು ಮಾಧ್ಯಮ ವರದಿಗಳು ಊಹಿಸಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಈ ಹೆಚ್ಚಳಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದರೂ, ಕೇಂದ್ರ ಸರ್ಕಾರಿ ನೌಕರರು ಸೆಪ್ಟೆಂಬರ್ ನಿಂದ ಹೆಚ್ಚಿಸಲಾದ ಡಿಎ ಪ್ರಯೋಜನವನ್ನು ಪಡೆಯುತ್ತಾರೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img