Friday, July 23, 2021
Homeಜಿಲ್ಲೆಬೆಂಗಳೂರುಹೋಟೆಲ್ ಸಪ್ಲೈಯರ್ ಮೇಲೆ ನಟ ದರ್ಶನ್ ಹಲ್ಲೆ ಆರೋಪ

ಇದೀಗ ಬಂದ ಸುದ್ದಿ

ಹೋಟೆಲ್ ಸಪ್ಲೈಯರ್ ಮೇಲೆ ನಟ ದರ್ಶನ್ ಹಲ್ಲೆ ಆರೋಪ

ಬೆಂಗಳೂರು : ಮೈಸೂರಿನ ಸ್ಟಾರ್ ಹೋಟೆಲ್ ನಲ್ಲಿ ನಟ ದರ್ಶನ್ ಮತ್ತು ಗ್ಯಾಂಗ್ ನಿಂದ ದಲಿತ ಸಪ್ಲೈಯರ್ ಮೇಲೆ ಹಲ್ಲೆ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ತನಿಖೆಗೆ ಆದೇಶಿಸಿದ್ದಾರೆ.

ಹೋಟೆಲ್ ಸಿಬ್ಬಂದಿ ಮೇಲೆ ಹಲ್ಲೆ ಪ್ರಕರಣ ಸಂಬಂಧ ನಿರ್ದೇಶಕ ಇಂದ್ರಜಿತ್ ಲಂಕೇಶ್ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿ ಪ್ರಕರಣವನ್ನು ತನಿಖೆಗೆ ಒಪ್ಪಿಸುವಂತೆ ಮನವಿ ಮಾಡಿದ್ದರು. ಇದೀಗ ದಲಿತ ಸಪ್ಲೈಯರ್ ಮೇಲೆ ಹಲ್ಲೆ ಪ್ರಕರಣವನ್ನು ತನಿಖೆ ನಡೆಸುವಂತೆ ಮೈಸೂರು ಕಮಿಷನರ್ ಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಆದೇಶ ನೀಡಿದ್ದಾರೆ.

ಗೃಹ ಸಚಿವರನ್ನು ಭೇಟಿಇಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಇಂದ್ರಜಿತ್ ಲಂಕೇಶ್, ಮೈಸೂರಿನ ಸಂದೇಶ್ ಪ್ರಿನ್ಸ್ ಹೋಟೆಲ್ ನಲ್ಲಿ ದಲಿತ ಸಪ್ಲೈಯರ್ ಮೇಲೆ ನಟ ದರ್ಶನ್ ಹಾಗೂ ಸ್ನೇಹಿತರು ಹಲ್ಲೆ ನಡೆಸಿದ್ದಾರೆ. ಹಲ್ಲೆಯಿಂದಾಗಿ ಸಪ್ಲೈಯರ್ ನ ಕಣ್ಣು ಬ್ಲರ್ ಆಗಿದೆ. ದರ್ಶನ್ ಜೊತೆಗೆ ರಾಕೇಶ್, ಹರ್ಷ, ಪಾಪಣ್ಣ ಇದ್ದರು. ಈ ಬಗ್ಗೆ ಸಾಕ್ಷ್ಯಾಧಾರಗಳು ನನ್ನ ಬಳಿ ಇದೆ ಎಂದು ಆರೋಪಿಸಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img