Friday, July 23, 2021
Homeಸುದ್ದಿ ಜಾಲಸತತ ಏರಿಕೆ ಕಂಡ ಚಿನ್ನದ ಬೆಲೆ

ಇದೀಗ ಬಂದ ಸುದ್ದಿ

ಸತತ ಏರಿಕೆ ಕಂಡ ಚಿನ್ನದ ಬೆಲೆ

ಬಂಗಾದರ ಮೇಲೆ ಹೂಡಿಕೆ ಮಾಡೋದು ಒಂದು ರೀತಿ ಭದ್ರತೆಯ ಪ್ರತೀಕ. ಇಂದು ಕೊಂಡ ಒಂದಿಷ್ಟೇ ಬಂಗಾರ ಕೆಲ ಸಮಯದ ನಂತರ ಭಾರೀ ಲಾಭ ತಂದುಕೊಡುತ್ತದೆ. ಬಹುಶಃ ಹಣದುಬ್ಬರದ ಪ್ರತೀ ಏರಿಳಿಕೆಯಲ್ಲೂ ಉತ್ತಮ ಬೆಲೆ ಕಾಯ್ದಿರಿಸಿಕೊಂಡಿರುವ ಏಕೈಕ ವಸ್ತು ಚಿನ್ನವೇ. ಹಾಗಾಗಿ ಪ್ರತಿದಿನ ದಿನಕ್ಕೆರಡು ಬಾರಿ ಚಿನ್ನದ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಏರಿಳಿತವಾದರೂ ಜನರಿಗೆ ಅದರಲ್ಲಿ ಆಸಕ್ತಿ ಒಂಚೂರೂ ಕಡಿಮೆ ಆಗೋದೇ ಇಲ್ಲ.

ಒಂದು ಕಡೆ ಹೂಡಿಕೆಯ ರೂಪದಲ್ಲಿ ಚಿನ್ನಕ್ಕೆ ಡಿಮ್ಯಾಂಡ್ ಇದ್ದರೆ ಮತ್ತೊಂದೆಡೆ ಆಭರಣ ಕೊಳ್ಳಲು ಭಾರತೀಯರೂ ಸೇರಿದಂತೆ ನಾನಾ ದೇಶಗಳ ಜನರಿಗೆ ಹೆಚ್ಚಿನ ಆಸಕ್ತಿ ಇರುತ್ತದೆ. ಇವೆಲ್ಲವೂ ಸೇರಿ ಪ್ರತಿದಿನದ ಚಿನ್ನದ ಬೆಲೆಯ ಮೇಲೆ ಎಲ್ಲರಿಗೂ ಒಂದು ಕಣ್ಣು ಇದ್ದೇ ಇರುತ್ತದೆ.

ಚಿನ್ನದ ಬೆಲೆ ನಿನ್ನೆಯಿಂದ ಏರಿಕೆಯಾಗುತ್ತಲೇ ಇದೆ. ಇಂದು ಸಹ ಚಿನ್ನದ ಬೆಲೆ ಏರಿಕೆ ಕಂಡಿದೆ. ನಿನ್ನೆ 10 ಗ್ರಾಂಗೆ 180 ರೂಪಾಯಿ ಏರಿಕೆಯಾಗಿತ್ತು. ಇಂದು 10 ಗ್ರಾಂ ಚಿನ್ನಕ್ಕೆ 190 ರೂಪಾಯಿ ಏರಿಕೆಯಾಗಿದೆ. ನೀವೇನಾದರೂ ಚಿನ್ನ ಖರೀದಿಸಲು ಯೋಚಿಸುತ್ತಿದ್ದರೆ ದೇಶದ ಪ್ರಮುಖ ನಗರಗಳಲ್ಲಿ ಇಂದು ಚಿನ್ನಕ್ಕೆ ಎಷ್ಟು ಬೆಲೆ ಇದೆ ಎಂಬ ಬಗ್ಗೆ ಇಲ್ಲಿದೆ ಪೂರ್ತಿ ಮಾಹಿತಿ. ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ (Gold Price) ನಿನ್ನೆ 48,880 ರೂ. ಇದ್ದದ್ದು 48,990 ರೂ. ಆಗಿದೆ.

ಅದೇ ರೀತಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ ನಿನ್ನೆ ಬೆಂಗಳೂರಿನಲ್ಲಿ 44,880 ರೂ. ಇದ್ದದ್ದು, 44,900 ರೂ. ಆಗಿದೆ. ಭಾರತದಲ್ಲಿ ಇಂದು ಬೆಳ್ಳಿ ಬೆಲೆಯೂ ಏರಿಕೆಯಾಗಿದ್ದು, 1 ಕೆ.ಜಿ.ಗೆ 300 ರೂ. ಹೆಚ್ಚಾಗಿದೆ. ನಿನ್ನೆ 1 ಕೆಜಿ ಬೆಳ್ಳಿಗೆ 69,200 ರೂ. ಇತ್ತು. ಇಂದು 1 ಕೆ.ಜಿ ಬೆಳ್ಳಿಗೆ 69,500 ರೂ. ಆಗಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img