Sunday, August 1, 2021
Homeಸುದ್ದಿ ಜಾಲಕರಾವಳಿಯಲ್ಲಿ ನಿಲ್ಲದ ಮಳೆ: ಪುತ್ತೂರಿನ ಚೆಲ್ಯಡ್ಕ ಸೇತುವೆ ಮುಳುಗಡೆ

ಇದೀಗ ಬಂದ ಸುದ್ದಿ

ಕರಾವಳಿಯಲ್ಲಿ ನಿಲ್ಲದ ಮಳೆ: ಪುತ್ತೂರಿನ ಚೆಲ್ಯಡ್ಕ ಸೇತುವೆ ಮುಳುಗಡೆ

ದಕ್ಷಿಣ ಕನ್ನಡ: ಕರಾವಳಿಯಲ್ಲಿ ಇಂದು ಕೂಡಾ ಭಾರಿ ಮಳೆ ಮುಂದುವರೆದಿದ್ದು, ಮುಂದಿನ ನಾಲ್ಕೈದು ದಿ‌ನ ಮಳೆ ಇದೇ ರೀತಿ ಮುಂದುವರಿಯುವ ಸೂಚನೆಯನ್ನು ಹವಾಮಾನ ಇಲಾಖೆ ಈಗಾಗಲೇ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ 16 ರಂದು ರೆಡ್‌ ಅಲರ್ಟ್‌ ಘೋಷಿಸಲಾಗಿದ್ದು, ಭಾರೀ ಮಳೆಯ ಸಾಧ್ಯತೆಯಿದೆ. ಕಳೆದ ನಾಲ್ಕೈದು ದಿನಗಳಿಂದ ಕರಾವಳಿಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಪ್ರಮುಖ ನದಿಗಳಾದ ನೇತ್ರಾವತಿ ‌ಮತ್ತು ಕುಮಾರಧಾರ ನದಿಗಳಲ್ಲಿ ನೀರಿನ ಹರಿವು ಹೆಚ್ಚಾಗಿದೆ.

ಕುಕ್ಕೆ ಸುಬ್ರಹ್ಮಣ್ಯ ದ ಕುಮಾರಧಾರಾ ಸ್ನಾನಘಟ್ಟ ಇಂದು ಎರಡನೇ ದಿನವೂ ಮುಳುಗಡೆಯಾಗಿದ್ದು, ಕುಮಾರಧಾರಾ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಕುಮಾರಧಾರಾ ಮತ್ತು ನೇತ್ರಾವತಿ ನದಿಯ ಸಂಗಮ ಪ್ರದೇಶವಾಗ ಉಪ್ಪಿನಂಗಡಿಯಲ್ಲಿ ನದಿ ನೀರು ಅಪಾಯದ ಮಟ್ಟಕ್ಕೆ ತಲುಪಲು ಕೆಲವೇ ಮೀಟರ್ ಅಂತರವಿದೆ. ಈಗಾಗಲೇ ಸುಮಾರು 27.6 ಅಡಿ ನೀರಿದ್ದು, ಉಪ್ಪಿನಂಗಡಿಯಲ್ಲಿ ನದಿ ನೀರಿನ ಅಪಾಯದ ಮಟ್ಟ 30 ಅಡಿಗಳಾಗಿವೆ. ಈ ಹಿನ್ನಲೆಯಲ್ಲಿ ಸ್ಥಳದಲ್ಲಿ ಗೃಹರಕ್ಷಕ ದಳ ಸೇರಿದಂತೆ ಕಂದಾಯ ಅಧಿಕಾರಿಗಳೂ ಬೀಡುಬಿಟ್ಟಿದ್ದು, ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img