Friday, July 30, 2021
Homeಜಿಲ್ಲೆಬೆಂಗಳೂರುರಾಜ್ಯದಲ್ಲಿ ಮುಂದಿನ 5 ವರ್ಷದೊಳಗೆ ಒಂದು ಕೋಟಿ ಉದ್ಯೋಗ ಸೃಷ್ಟಿ:CM

ಇದೀಗ ಬಂದ ಸುದ್ದಿ

ರಾಜ್ಯದಲ್ಲಿ ಮುಂದಿನ 5 ವರ್ಷದೊಳಗೆ ಒಂದು ಕೋಟಿ ಉದ್ಯೋಗ ಸೃಷ್ಟಿ:CM

ಬೆಂಗಳೂರು: “ಮಿಷನ್ ಯುವ ಸಮೃದ್ಧಿ” ಯೋಜನೆಯಡಿಯಲ್ಲಿ ರಾಜ್ಯದಲ್ಲಿ ಮುಂದಿನ ಐದು ವರ್ಷಗಳ ಒಳಗೆ ಒಂದು ಕೋಟಿ ಉದ್ಯೋಗಾವಕಾಶ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದ್ದಾರೆ.

ರಾಜ್ಯದ ಎಂಟು ಜಿಲ್ಲೆಗಳಲ್ಲಿ ಮಿಷನ್ ಯುವಸಮೃದ್ಧಿ ಯೋಜನೆಯಡಿ ಪ್ರಾಯೋಗಿಕ ಯೋಜನೆ ಕೈಗೊಳ್ಳಲಾಗಿದೆ. ಈ ವಿಶೇಷ ಯೋಜನೆ ಸಲುವಾಗಿ ಕಾರ್ಯಪಡೆ ರೂಪಿಸಲಾಗಿದೆ. ಶೀಘ್ರವೇ ಕಾರ್ಯಪಡೆ ವರದಿ ಸಲ್ಲಿಸಲಿದೆ ಎಂದು ಹೇಳಿದ್ದಾರೆ. ಕೌಶಲಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ವತಿಯಿಂದ ಗುರುವಾರ ಆಯೋಜಿಸಲಾಗಿದ್ದ “ವಿಶ್ವ ಯುವ ಕೌಶಲ” ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

“ದೇಶದಲ್ಲಿನ ಮಾನವ ಸಂಪನ್ಮೂಲದ 18-35 ವಯೋಮಾನದವರಲ್ಲಿ ಭಾರತ ಎರಡನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ 16-35ರ ವಯೋಮಾನದವರ ಜನಸಂಖ್ಯೆ 2.21 ಕೋಟಿ ಇದೆ. ಜಾಗತಿಕ ಮಾನದಂಡಗಳಿಗೆ ಅನುಗುಣವಾಗಿ ಯುವಜನತೆ ಕೌಶಲ ಹೆಚ್ಚಿಸುವ ಮೂಲಕ ಆರ್ಥಿಕ ಹಾಗೂ ಸಾಮಾಜಿಕ ಅಭಿವೃದ್ಧಿ ಸಾಧಿಸಲು ಹಲವು ಕಾರ್ಯಕ್ರಮಗಳನ್ನು ಆರಂಭಿಸಲಾಗಿದೆ” ಎಂದು ತಿಳಿಸಿದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img