Friday, July 23, 2021
Homeಸುದ್ದಿ ಜಾಲಪಿ.ಎಸ್.ಶ್ರೀಧರನ್ ಪಿಳ್ಳೆ ಗೋವಾ ರಾಜ್ಯಪಾಲರಾಗಿ ಅಧಿಕಾರ ಸ್ವೀಕಾರ

ಇದೀಗ ಬಂದ ಸುದ್ದಿ

ಪಿ.ಎಸ್.ಶ್ರೀಧರನ್ ಪಿಳ್ಳೆ ಗೋವಾ ರಾಜ್ಯಪಾಲರಾಗಿ ಅಧಿಕಾರ ಸ್ವೀಕಾರ

ಪಣಜಿ : ಗೋವಾದ ನೂತನ ರಾಜ್ಯಪಾಲರಾಗಿ ನಿಯುಕ್ತಿಗೊಂಡಿದ್ದ ಪಿ. ಎಸ್. ಶ್ರೀಧರನ್ ಪಿಳ್ಳೆ ಅವರು ಇಂದು(ಗುರುವಾರ, ಜುಲೈ 15) ಗೋವಾದ ರಾಜ್ಯಪಾಲರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಬಾಂಬೆ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ದೀಪಾಂಕರ ದತ್ತ ಅವರು ನೂತನ ರಾಜ್ಯಪಾಲರಿಗೆ ಪ್ರಮಾಣವಚನ ಬೋಧಿಸಿದರು.

ಗೋವಾದ ದೋನಾಪಾವುಲ್‍ ನಲ್ಲಿರುವ ರಾಜಭವನದಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ, ಮುಖ್ಯಮಂತ್ರಿ ಪ್ರಮೋದ ಸಾವಂತ್, ಕೇಂದ್ರ ಸಚಿವ ಶ್ರೀಪಾದ ನಾಯ್ಕ, ರಾಜ್ಯ ಪ್ರತಿಪಕ್ಷದ ನಾಯಕ ದಿಗಂಬರ್ ಕಾಮತ್, ಮತ್ತಿತರರು ಉಪಸ್ಥಿತರಿದ್ದರು.

ಗೋವಾದ ನೂತನ ರಾಜ್ಯಪಾಲ ಪಿ. ಎಸ್. ಶ್ರೀಧರನ್ ಪಿಳ್ಳೆ ಅವರು ಇದಕ್ಕೂ ಮುನ್ನಾ ಮಿಜೋರಾಂ ನ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು. ಪಿಳ್ಳೆ ಒಬ್ಬ ಪ್ರಸಿದ್ಧ ಲೇಖಕರೂ ಆಗಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img