Friday, July 23, 2021
Homeಕೋವಿಡ್-19ಕಳೆದ 24 ಗಂಟೆಗಳಲ್ಲಿ 41,806 ಮಂದಿಗೆ ಕೊರೊನಾ ಸೋಂಕು ದೃಢ

ಇದೀಗ ಬಂದ ಸುದ್ದಿ

ಕಳೆದ 24 ಗಂಟೆಗಳಲ್ಲಿ 41,806 ಮಂದಿಗೆ ಕೊರೊನಾ ಸೋಂಕು ದೃಢ

ನವದೆಹಲಿ : ದೇಶದಲ್ಲಿ ಕೆಲ ದಿನಗಳಿಂದ ಇಳಿಕೆಯ ಹಾದಿಯಲ್ಲಿದ್ದ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಇಂದು ಮತ್ತೆ ಏರಿಕೆಯಾಗಿದ್ದು, ಕಳೆದ 24 ಗಂಟೆಗಳಲ್ಲಿ 41,806 ಮಂದಿಗೆ ಹೊಸದಾಗಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 41,806 ಮಂದಿಗೆ ಹೊಸದಾಗಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,09,87,880 ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ 581 ಜನರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದು, ಈ ಮೂಲಕ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 4,11,989 ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 39,130 ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೊರೊನಾದಿಂದ 3,01,43,850 ಜನರು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ದೇಶದಲ್ಲಿ 4,32,041 ಸಕ್ರಿಯ ಕೇಸ್ ಗಳಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img