Friday, July 30, 2021
Homeಬೆಂಗಳೂರುರಾಜ್ಯದ ವಿವಿಧ ಜಿಲ್ಲೆಗಳ 9 ಅಧಿಕಾರಿಗಳ ಮನೆಗಳ ಮೇಲೆ ದಾಳಿ

ಇದೀಗ ಬಂದ ಸುದ್ದಿ

ರಾಜ್ಯದ ವಿವಿಧ ಜಿಲ್ಲೆಗಳ 9 ಅಧಿಕಾರಿಗಳ ಮನೆಗಳ ಮೇಲೆ ದಾಳಿ

ಬೆಂಗಳೂರು : ಇಂದು ಬೆಳ್ಳಂಬೆಳಗ್ಗೆ ರಾಜ್ಯದ ಹಲವು ಭ್ರಷ್ಟ ಅಧಿಕಾರಿಗಳಿಗೆ ಎಸಿಬಿ ಶಾಕ್ ನೀಡಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 40 ಕಡೆ 9 ಅಧಿಕಾರಿಗಳ ಮನೆಗಳ ಮೇಲೆ ಎಸಿಬಿ ದಾಳಿ ಮಾಡಿದೆ.

ಇಂದು ಬೆಳಗ್ಗೆ ಎಸಿಬಿ ಅಧಿಕಾರಿಗಳ ತಂಡ ಏಕಕಾಲಕ್ಕೆ ಶಿವಮೊಗ್ಗ, ದಾವಣಗೆರೆ, ಉಡುಪಿ, ಮಂಡ್ಯ,ಬೆಂಗಳೂರು ಸೇರಿದಂತೆ 40 ಕಡೆಗಳಲ್ಲಿ ದಾಳಿ ನಡೆಸಿದ್ದು, ಅಕ್ರಮ ಆಸ್ತಿ ಗಳಿಕೆ ಕುರಿತು ಮಾಹಿತಿ ಬಂದ ಹಿನ್ನೆಲೆಯಲ್ಲಿ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ವಿಜಯಪುರ ಹೆಸ್ಕಾಂ ಇಂಜಿನಿಯರ್ ಸಿದ್ಧರಾಮ ಮಲ್ಲಿಕಾರ್ಜುನ್, ಕೋರಮಂಗಲ ಆರ್‌ಟಿಓ ಅಧಿಕಾರಿ ಕೃಷ್ಣಮೂರ್ತಿ, ಬಳ್ಳಾರಿ ಎಲೆಕ್ಟ್ರಿಕಲ್ ಇಂಜಿನಿಯರ್ ವಿಜಯ್ ಕುಮಾರ್, ಕೋಲಾರ ಜಿಲ್ಲೆ ಮಾಲೂರು ನಗರಸಭೆ ಯೋಜನಾ ನಿರ್ದೇಶಕ ಹೆಚ್ ಆರ್ ಕೃಷ್ಣಪ್ಪ ಅವರ ಮನೆ, ಕಚೇರಿಯ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆ, ಆಸ್ತಿಪತ್ರಗಳ ಪರಿಶೀಲನೆ ನಡೆಸಿದ್ದಾರೆ.

ಮಂಗಳೂರಿನ ನಗರ ಅಭಿವೃದ್ಧಿ ಘಟಕದ ಇಂಜಿನಿಯರ್ ಜಿ. ಶ್ರೀಧರ್, ಉಡುಪಿಯ ಕರ್ನಾಟಕ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಇಂಜಿನಿಯರ್ ಕೃಷ್ಣ, ಕೆಆರ್ ಡಿಎಲ್ ಅಧಿಕಾರಿ ಆರ್. ಪಿ ಕುಲಕರ್ಣಿ, ಮಂಡ್ಯದ ಅರಣ್ಯ ಅಧಿಕಾರಿ ವೆಂಕಟೇಶ್, ಮನೆ, ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಲಾಗಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img