Friday, July 30, 2021
Homeಜಿಲ್ಲೆಬೆಂಗಳೂರುನಟ ದರ್ಶನ್ ಪರ ಬಿ.ಸಿ. ಪಾಟೀಲ್ ಬ್ಯಾಟಿಂಗ್.!

ಇದೀಗ ಬಂದ ಸುದ್ದಿ

ನಟ ದರ್ಶನ್ ಪರ ಬಿ.ಸಿ. ಪಾಟೀಲ್ ಬ್ಯಾಟಿಂಗ್.!

ಬೆಂಗಳೂರು: ನಟ ದರ್ಶನ್ ಬಹಳ ಒಳ್ಳೆಯ ವ್ಯಕ್ತಿ. ಕಷ್ಟಪಟ್ಟು ಬೆಳೆದು ಈ ಮಟ್ಟಕ್ಕೆ ಬಂದಿದ್ದಾರೆ. ಅವರ ಮೇಲೆ ಅನಗತ್ಯ ಆರೋಪ ಮಾಡಿ ತೇಜೋವಧೆಗೆ ಯತ್ನಿಸಲಾಗುತ್ತಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ.

ದರ್ಶನ್ ವಿರುದ್ಧ ಹಲ್ಲೆ ಆರೋಪಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಅವರನ್ನು ಕೃಷಿ ರಾಯಭಾರಿ ಸ್ಥಾನದಿಂದ ತೆಗೆಯಬೇಕು ಎಂಬ ಆಗ್ರಹಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಕೃಷಿ ಇಲಾಖೆ ರಾಯಭಾರಿ ಸ್ಥಾನದಿಂದ ದರ್ಶನ್ ಅವರನ್ನು ಕೈಬಿಡುವ ಪ್ರಶ್ನೆಯೇ ಇಲ್ಲ. ದರ್ಶನ್ ಅವರ ತೇಜೋವಧೆ ಮಾಡುವ ಪ್ರಯತ್ನ ನಡೆದಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದರು.

ಇನ್ನು ತಲೆ ತೆಗೆಯುವೆ ಎಂಬ ದರ್ಶನ್ ಹೇಳಿಕೆಗೆ ಪ್ರತಿಕ್ರಿಯಿಸಿದ ಬಿ.ಸಿ. ಪಾಟೀಲ್, ಅವರು ಯಾರನ್ನು ಉದ್ದೇಶಿಸಿ ಅಥವಾ ಗಮನದಲ್ಲಿಟ್ಟುಕೊಂಡು ಹಾಗೇ ಹೇಳಿದ್ದಲ್ಲ. ಆ ಸಂದರ್ಭದಲ್ಲಿ ಒತ್ತಡದಿಂದ ಕೆಲ ಮಾತುಗಳು ಬಂದಿರುತ್ತವೆ ಅಷ್ಟೇ ಎಂದು ಸಮರ್ಥಿಸಿಕೊಂಡಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img