Friday, July 23, 2021
Homeಬೆಂಗಳೂರುತಿಂಗಳಿಗೆ 1.5 ಕೋಟಿ ಡೋಸ್ ಲಸಿಕೆ ಒದಗಿಸಲು ಪಿಎಂಗೆ ಸಿಎಂ ಮನವಿ

ಇದೀಗ ಬಂದ ಸುದ್ದಿ

ತಿಂಗಳಿಗೆ 1.5 ಕೋಟಿ ಡೋಸ್ ಲಸಿಕೆ ಒದಗಿಸಲು ಪಿಎಂಗೆ ಸಿಎಂ ಮನವಿ

ಬೆಂಗಳೂರು : ಡಿಸೆಂಬರ್ ಅಂತ್ಯಕ್ಕೆ ರಾಜ್ಯದ ಎಲ್ಲರಿಗೂ ಲಸಿಕೆ ನೀಡುವ ಗುರಿ ಇರಿಸಿಕೊಳ್ಳಲಾಗಿದೆ. ರಾಜ್ಯದಲ್ಲಿ ಈವರೆಗೆ 2.62 ಕೋಟಿ ಲಸಿಕೆ ನೀಡಲಾಗಿದೆ. ಗುರಿ ತಲುಪಲು ಪ್ರತಿ ದಿನ 5 ಲಕ್ಷ ಡೋಸ್​ಗಳಂತೆ ತಿಂಗಳಿಗೆ 1.5 ಕೋಟಿ ಡೋಸ್ ಲಸಿಕೆ ಒದಗಿಸುವಂತೆ ಪ್ರಧಾನಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮನವಿ ಮಾಡಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೋವಿಡ್-19 ಪರಿಸ್ಥಿತಿ ಕುರಿತಂತೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ನಡೆಸಿದ ವಿಡಿಯೋ ಕಾನ್ಫರೆನ್ಸ್​ನಲ್ಲಿ ಗೃಹ ಕಚೇರಿ ಕೃಷ್ಣಾದಿಂದ ಭಾಗವಹಿಸಿ ಸಿಎಂ ಬಿಎಸ್‌ವೈ ಮಾತನಾಡಿದರು. ಇದಕ್ಕೂ ಮೊದಲು ಆರಂಭದಲ್ಲಿ ಕಾನ್ಫರೆನ್ಸ್ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, 2ನೇ ಅಲೆ ನಿಯಂತ್ರಣಕ್ಕೆ ಬಂದಿದ್ದರೂ 3ನೇ ಅಲೆಗೆ ಪೂರ್ವಸಿದ್ಧತೆ ಮಾಡಿಕೊಳ್ಳಬೇಕು. ಆರೋಗ್ಯ ವ್ಯವಸ್ಥೆಯ ಮೂಲಸೌಕರ್ಯ ಹೆಚ್ಚಿಸಬೇಕು ಎಂದು ಸಲಹೆ ನೀಡಿದರು.

ಯುರೋಪ್ ಮತ್ತಿತರ ರಾಷ್ಟ್ರಗಳಲ್ಲಿ ಪ್ರಕರಣಗಳ ಸಂಖ್ಯೆ ತೀವ್ರವಾಗಿ ಹೆಚ್ಚುತ್ತಿರುವ ಹಿನ್ನೆಲೆ ನಮ್ಮ ದೇಶದಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು. ರಾಜ್ಯಗಳ ಪಾತ್ರ ಇದರಲ್ಲಿ ಮಹತ್ವದ್ದಾಗಿದೆ. ಎಲ್ಲಾ ರಾಜ್ಯಗಳು ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮಕೈಗೊಳ್ಳುವಂತೆ ತಿಳಿಸಿದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img