Friday, July 30, 2021
Homeಜಿಲ್ಲೆಬೆಂಗಳೂರುಕೋವಿಡ್ ನಿಂದ ಪೋಷಕರ ಕಳೆದುಕೊಂಡ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ

ಇದೀಗ ಬಂದ ಸುದ್ದಿ

ಕೋವಿಡ್ ನಿಂದ ಪೋಷಕರ ಕಳೆದುಕೊಂಡ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ

ಬೆಂಗಳೂರು: ಕೋವಿಡ್ ಸಾಂಕ್ರಾಮಿಕ ರೋಗದಿಂದ ಪೋಷಕರನ್ನು ಕಳೆದುಕೊಂಡಿರುವ ವಿದ್ಯಾರ್ಥಿಗಳನ್ನು ದತ್ತು ಪಡೆದು ಉಚಿತವಾಗಿ ಶಿಕ್ಷಣ ನೀಡಲು ವಿಶ್ವವಿದ್ಯಾಲಯ ನಿರ್ಧರಿಸಿದೆ ಎಂದು ರೇವಾ ವಿಶ್ವವಿದ್ಯಾಲಯದ ಕುಲಪತಿ ಡಾ.ಪಿ.ಶ್ಯಾಮರಾಜು ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಕೊರೊನಾದಿಂದ ಪೋಷಕರನ್ನು ಕಳೆದುಕೊಂಡಿರುವ ಮತ್ತು ಕುಟುಂಬದಲ್ಲಿ ದುಡಿಯುತ್ತಿದ್ದ ಪೋಷಕರು ಉದ್ಯೋಗ ಕಳೆದುಕೊಂಡು ಶುಲ್ಕ ಭರಿಸಲು ಸಾಧ್ಯವಾಗದ ಪರಿಸ್ಥಿತಿಯಿದ್ದರೆ ಅಂತಹ ವಿದ್ಯಾರ್ಥಿಗಳಿಗೆ ಅತಿ ಕಡಿಮೆ ವೆಚ್ಚದಲ್ಲಿ ಶಿಕ್ಷಣ ನೀಡಲಾಗುವುದು ಎಂದು ಶ್ಯಾಮರಾಜು ಹೇಳಿದ್ದಾರೆ.

ವಿಶ್ವವಿದ್ಯಾಲಯದಲ್ಲಿ ಡಿಜಿಟಲೀಕರಣ ಸೌಲಭ್ಯ ಅಳವಡಿಸಿಕೊಂಡಿರುವುದರಿಂದ ವಿದ್ಯಾರ್ಥಿಗಳಿಗೆ ವೃತ್ತಿ ಅಭಿವೃದ್ಧಿ ಕೇಂದ್ರದ ಮೂಲಕ ಆನ್‌ಲೈನ್ ತರಬೇತಿ ನೀಡಲಾಗುತ್ತಿದೆ. ಇತ್ತೀಚೆಗೆ ನಡೆದ ಆನ್‌ಲೈನ್ ನೇಮಕಾತಿಯಲ್ಲಿ ಪ್ರತಿಷ್ಠಿತ ಕಂಪನಿಗಳಲ್ಲಿ ಶೇ 100ರಷ್ಟು ಉದ್ಯೋಗಾವಕಾಶಗಳನ್ನು ಕಲ್ಪಿಸಲಾಗಿದೆ ಎಂದು ಹೇಳಿದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img